ಬೆಂಗಳೂರು:- ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರು ಮಂದಿಗೆ ಇದೀಗ ಮತ್ತೊಂದು ಬರೆ ಬೀಳುವ ಸಾಧ್ಯತೆ ಇದೆ. ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿತ್ತು. ಇದೀಗ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಆಟೋ ಚಾಲಕರ ಮನವಿಯನ್ನು ಪುರಸ್ಕರಿಸಿ, ಈಗಾಗಲೇ ಅನೇಕ ಅಗತ್ಯ ವಸ್ತುಗಳ ದರ ಏರಿಕೆ ಆಗಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡಲು ಜಿಲ್ಲಾಧಿಕಾರಿ ಕೂಡಲೇ ಗ್ರೀನ್ ಸಿಗ್ನಲ್ ನೀಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಕನಿಷ್ಠ ದರ 30 ರೂಪಾಯಿ ಹಾಗೂ ನಂತರ ಪ್ರತಿ ಕಿಲೋ ಮೀಟರ್ ಗೆ 15 ರೂಪಾಯಿ ದರ ಇದೆ. ಇದೀಗ ಪರಿಷ್ಕೃತ ದರ ಪಟ್ಟಿ ಪ್ರಕಾರ ಕನಿಷ್ಠ ದರ 30 ರಿಂದ 35 ರೂಪಾಯಿಗೆ, ಅಂದರೆ ಐದು ರೂಪಾಯಿ ಏರಿಕೆಯಾಗುವ ಸಾಧ್ಯತೆಯಿದೆ. ನಂತರದ ಪ್ರತಿ ಕಿಲೋ ಮೀಟರ್ ದರ 15 ರಿಂದ 18 ರೂಪಾಯಿಗೆ, ಅಂದರೆ ಮೂರು ರೂಪಾಯಿ ಏರಿಕೆ ಆಗಲಿದೆ.