ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾನ್ಸ್ ಇಂದು ಬೆಳಂ ಬೆಳಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಮ್ಯಾಕ್ಸ್ ಬಳಿಕ ಕಿಚ್ಚನ ಭತ್ತಳಿಕೆಯಿಂದ ಬರ್ತಿರುವ ಮತ್ತೊಂದು ಸಿನಿಮಾ ಬಿಲ್ಲ ರಂಗ ಬಾಷಾ ಚಿತ್ರತಂಡ ಸ್ಪೆಷಲ್ ವಿಡಿಯೋವೊಂದನ್ನು ರಿಲೀಸ್ ಮಾಡಿದೆ. ಏಪ್ರಿಲ್ 16ರಿಂದ ಚಿತ್ರದ ಚಿತ್ರೀಕರಣ ಶುರುವಾಗಿದ್ದು, ಬೆಂಗಳೂರಿನಲ್ಲಿ ಭರದಿಂದ ಶೂಟಿಂಗ್ ಸಾಗುತ್ತಿದೆ. ‘ಹೊರಾಂಗಣ ಹಾಗೂ ಒಳಾಂಗಣ ಎರಡೂ ಕಡೆ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 20 ದಿನಗಳ ಚಿತ್ರೀಕರಣ ನಡೆಸಲಾಗುತ್ತದೆ. ಬ್ರೇಕ್ ಬಳಿಕ ಎರಡನೇ ಹಂತದ ಚಿತ್ರೀಕರಣ ಚಾಲುವಾಗಲಿದೆ.
ಬೆಂಗಳೂರಿನ ಕಂಠೀರವ ಸ್ಟುಡೀಯೋದಲ್ಲಿ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣದಲ್ಲಿ ಭಾಗಿಯಾಗುವ ಟೆಕ್ನಿಷಿಯನ್ಸ್ ಗೆ ಐಡಿ ಕಾರ್ಡ್ ನೀಡಲಾಗಿದೆ. ಈ ಐಡಿ ಕಾರ್ಡ್ ಇದ್ದರೆ ಮಾತ್ರ ಒಳಗೆ ಎಂಟ್ರಿ. ಇನ್ನೂ ಮೇಕಪ್ ಹಚ್ಚಿ ಕಿಚ್ಚ ಕ್ಯಾಮೆರಾ ಮುಂದೆ ಬರುವ ಶೂಟಿಂಗ್ ಪ್ರೊಸೆಸ್ ವಿಡಿಯೋವನ್ನು ಚಿತ್ರತಂಡ ಹಂಚಿಕೊಂಡಿದೆ.
ಬಿಲ್ಲ ರಂಗ ಬಾಷಾ ಚಿತ್ರ ಬಹಳ ದೊಡ್ಡದಾಗಿಯೇ ತಯಾರಾಗುತ್ತಿದ್ದು, ಇದಕ್ಕಾಗಿ ಇಡೀ ತಂಡ ಬಹಳ ಶ್ರಮ ಹಾಕುತ್ತಿದೆ. ಈ ಹಿಂದೆ ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಬಿಲ್ಲ ರಂಗ ಭಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ತಮ್ಮದೇ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರವನ್ನು ಅವರು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಈ ಮೊದಲು ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದಾದ ಬಳಿಕ ಈ ಜೋಡಿ ‘ಬಿಲ್ಲ ರಂಗ ಬಾಷಾ’ ಸಿನಿಮಾಗೆ ಕೈ ಜೋಡಿಸಿದ್ದು, ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.