ಕಾರವಾರ : ಪಹಲ್ಗಾಮ್‌ನಲ್ಲಿ ಉಗ್ರ ದಾಳಿ ಬೆನ್ನಲ್ಲೇ ದೇಶವ್ಯಾಪಿ ಕೆಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದೇ ಹಿನ್ನೆಲೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಕರಾವಳಿ ಕಾವಲು ಪಡೆ, ಭಾರತೀಯ ಕೊಸ್ಟ್ ಗಾರ್ಡ್, ನೌಕಾ ನೆಲೆ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರಿಕೆ ಬೋಟ್ ಹಾಗೂ ಹಡಗುಗಳ ಮೇಲೆ ಕಣ್ಣಿಡಲಾಗಿದ್ದು, ಕರಾವಳಿ ಕಾವಲು ಪಡೆ ಹಾಗೂ ಭಾರತಿಯ ಕೊಸ್ಟಲ್ ಗಾರ್ಡ್ ಸಿಬ್ಬಂದಿ ಸಮುದ್ರದಾಳಕ್ಕೆ ಹೋಗಿ ಪ್ರತಿಯೊಂದು ಬೋಟ್ಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ಜಿಲ್ಲೆಯ ಬಂದರುಗಳಿಗೆ ಬರುವ ಪ್ರತಿಯೋಂದು ಪರ್ಷಿಯನ್ ಬೋಟ್ಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಪಾಕಿಸ್ತಾನದ ಪರವಾಗಿ ಮಾತನಾಡುತ್ತಲೇ ಇರುವುದು ಮುಜುಗರದ ಸಂಗತಿ: ಸಚಿವ ಜಿ. ಕಿಶನ್ ರೆಡ್ಡಿ
ದೇಶದ ಅತಿ ದೊಡ್ಡ ಕದಂಬ ನೌಕಾ ನೆಲೆ ಕಾರವಾರ ಬಳಿ ಇದೆ. ಹೀಗಾಗಿ ಕಾರವಾರ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಬರುವ ವಲಸಿಗರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ನೌಕಾನೆಲೆ ಭದ್ರತೆ ವಿಚಾರವಾಗಿ ಕೇಂದ್ರ ಗೃಹ ಇಲಾಖೆಯ ಸೂಚನೆಯ ಪ್ರಕಾರ, ನೌಕಾನೆಲೆಯ ಕೂಗಳತೆ ದೂರದಲ್ಲಿನ ರವೀಂದ್ರನಾಥ್ ಠಾಗೋರ ಕಡಲ ತೀರದಲ್ಲಿ ಮೇ 4 ರಂದು ನಡೆಯಬೇಕಿದ್ದ ಪ್ರಸಿದ್ಧ ಕರಾವಳಿ ಉತ್ಸವವನ್ನು ಮುಂದೂಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.