ಮಂಗಳೂರು : ಮಂಗಳೂರಿನಲ್ಲಿ ನಡದ ಗುಂಪು ಘರ್ಷಣೆಗೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನೂ ಘಟನೆ ಸಂಬಂಧ ಮತ್ತೆ ಮೂವರನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಪ್ರಕರಣದ ಹಿನ್ನೆಲೆ
ಮಂಗಳೂರು ನಗರದ ಕುಡುಪು ಎಂಬಲ್ಲಿ ಏಪ್ರಿಲ್ 27ರಂದು ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ ಮೊಹಮ್ಮದ್ ಆಶ್ರಫ್ ಕೂಡ ಅಲ್ಲಿಗೆ ಬಂದಿದ್ದ. ಕ್ರಿಕೆಟ್ ಆಟ ಆಡುವ ವೇಳೆ ಗಲಾಟೆ ಸಂಭವಿಸಿ ಆತನ ಮೇಲೆ ಹಲ್ಲೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆತ ಮರುದಿನ ಮೃತಪಟ್ಟಿದ್ದ. ಇದೀಗ ಘಟನೆಗೆ ಆತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣ ಎಂದು ಹೇಳಲಾಗಿದೆ.
ಇನ್ನೂ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪ್ ಕುಮಾರ್ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಘಟನೆಗೆ, ‘‘ಪಾಕಿಸ್ತಾನ ಪಾಕಿಸ್ತಾನ’’ ಎಂದು ಬೊಬ್ಬೆ ಹೊಡೆದಿದ್ದೇ ಕಾರಣ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ