ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆದ 2025 ರ ಐಪಿಎಲ್ನ (IPL 2025) 49ನೇ ಪಂದ್ಯದಲ್ಲೂ ಸಿಎಸ್‌ಕೆ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 190 ರನ್ ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ಕೊನೆಯ ಓವರ್ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು.
ಪಂಜಾಬ್ ಪರ ಪ್ರಭ್ಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್ನಲ್ಲಿ ಮಿಂಚಿದ ಚಾಹಲ್ ಒಂದೇ ಓವರ್ನಲ್ಲಿ 4 ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಪಂಜಾಬ್ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರೆ, ಸಿಎಸ್‌ಕೆ ತಂಡ ಅಧಿಕೃತವಾಗಿ ಪ್ಲೇಆಫ್ ರೇಸ್‌ನಿಂದ ಹೊರಬಿತ್ತು.
ಈ ಸೋಲಿನ ಬಳಿಕ ಮಾತನಾಡಿದ ಸಿಎಸ್‌ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಈ ಪಂದ್ಯದಲ್ಲಿ ನಾವು ಚೆನ್ನಾಗಿ ಆಡಿದ್ದೆವು. ಅದರಲ್ಲೂ ನಮ್ಮ ಬ್ಯಾಟಿಂಗ್ ಉತ್ತಮವಾಗಿತ್ತು. ಇದೇ ಮೊದಲ ಬಾರಿಗೆ ನಾವು ಸಾಕಷ್ಟು ರನ್ಗಳಿಸಲು ಯಶಸ್ವಿಯಾದೆವು.
ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
ಆದರೆ ಇದು ಉತ್ತಮ ಸ್ಕೋರ್ ಆಗಿತ್ತೇ ಎಂದು ಕೇಳಿದರೆ, ಖಂಡಿತವಾಗಿಯೂ ಅಲ್ಲ. ಅಂತಿಮ ಹಂತದಲ್ಲಿ ಸ್ಕೋರ್ಗಳಿಸುವಲ್ಲಿ ನಾವು ಎಡವಿದೆವು. ಕೊನೆಯ ಓವರ್ಗಳ ವೇಳೆ ಮತ್ತಷ್ಟು ರನ್ಗಳಿಸಿದ್ದರೆ ಉತ್ತಮ ಪೈಪೋಟಿ ನೀಡಬಹುದಿತ್ತು ಎಂದು ಧೋನಿ ಹೇಳಿದ್ದಾರೆ.
ನಮ್ಮ ಪರ ಡೆವಾಲ್ಡ್ ಬ್ರೆವಿಸ್ ಮತ್ತು ಸ್ಯಾಮ್ ಕರನ್ ಉತ್ತಮ ಜೊತೆಯಾಟ ಪ್ರದರ್ಶಿಸಿದ್ದರು. ಆದರೆ ಕೊನೆಯ 4 ಎಸೆತಗಳಿರುವಾಗಲೇ ನಾವು ಆಲೌಟ್ ಆಗಿದ್ದು ದುಬಾರಿಯಾಯಿತು. ಅಂತಿಮ ಹಂತದಲ್ಲಿ ನಾಲ್ವರು ಬ್ಯಾಟರ್ಗಳು ವಿಕೆಟ್ ಒಪ್ಪಿಸಿದ್ದು ಸ್ಕೋರ್ ಕಡಿಮೆಯಾಗುವಂತೆ ಮಾಡಿತು.
ಇದಾಗ್ಯೂ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದ್ದವು. ಹೀಗಾಗಿ ಬೌಲರ್ಗಳಿಂದ ಉತ್ತಮ ಪೈಪೋಟಿ ನಿರೀಕ್ಷಿಸಿದ್ದೆವು. ಆದರೆ ನಮ್ಮ ಫೀಲ್ಡರ್ಗಳು ಮಾಡಿದ ತಪ್ಪಿನಿಂದಾಗಿ ಸೋಲನುಭವಿಸಬೇಕಾಯಿತು. ನಾವು ಕೈ ಬಿಟ್ಟ ಕೆಲ ಕ್ಯಾಚ್ಗಳು ಇಡೀ ಪಂದ್ಯದ ಮೇಲೆ ಪರಿಣಾಮ ಬೀರಿತು. ಕೈಚೆಲ್ಲಿದ ಕ್ಯಾಚ್ಗಳಿಂದಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಬೇಕಾಯಿತು ಎಂದು ಮಹೇಂದ್ರ ಸಿಂಗ್ ಧೋನಿ ಅಭಿಪ್ರಾಯಪಟ್ಟಿದ್ದಾರೆ.