ಬೆಂಗಳೂರು: ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಿದೆ. ದೇಶದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳ ಬಗ್ಗೆ ನಿರ್ಧಾರ ಮಾಡಲು ಮತ್ತು ಭವಿಷ್ಯದ ಅನೇಕ ನಿರ್ಧಾರಕ್ಕೆ ಇದು ಸಹಾಯಕ ಎಂದು ಹೇಳಿದರು.
ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
ಜಾತಿ ಗಣತಿ, ಜನಗಣತಿ ಕುರಿತ ಕೇಂದ್ರದ ನಿರ್ಧಾರವು ಇಡೀ ದೇಶದ ಜನರಿಗೆ ಖುಷಿ ತಂದಿದೆ. ಇದನ್ನು ಸ್ವಾಗತಿಸುತ್ತೇವೆ. ವಿವಿಧ ಜಾತಿಗಳ ಪರಿಸ್ಥಿತಿ ತಿಳಿದುಕೊಳ್ಳಲು ಇದು ಸಹಾಯಕ. ಈ ನಿರ್ಧಾರವನ್ನು ಬಿಜೆಪಿ ಕರ್ನಾಟಕ ಘಟಕ ಸ್ವಾಗತಿಸುತ್ತದೆ ಎಂದರು.
ಇವತ್ತು ಕೇಂದ್ರ ಸರ್ಕಾರವು ಜಾತಿಗಣತಿ ಮಾಡಲು ನಿರ್ಧರಿಸಿದ್ದು ಟಿ.ವಿ.ಗಳಲ್ಲಿ ಬರುತ್ತಿದೆ. ಇದು ಕೇಂದ್ರದ ಸಂವಿಧಾನದತ್ತ ಅಧಿಕಾರ. ಹಿಂದೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೆಲವು ಪಕ್ಷಗಳು ಜಾತಿ ಸಮೀಕ್ಷೆ ನಡೆಸಿದ್ದವು ಎಂದು ರವಿಕುಮಾರ್ ಆಕ್ಷೇಪಿಸಿದರು.