ಬೆಂಗಳೂರು: ಕೇಂದ್ರ ಸರ್ಕಾರ ಸ್ಪಷ್ಟ, ವೈಜ್ಞಾನಿಕ ಹಾಗೂ ಕಾನೂನುಬದ್ಧ, ಅಧಿಕಾರದ ಭಾಗವಾಗಿ ಜಾತಿ ಗಣತಿಯನ್ನು ಮಾಡಲಿದೆ ಎಂದು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡಲು ಅಧಿಕಾರ ಇಲ್ಲದಿದ್ದರೂ ಸಾಮಾಜಿಕ ಮತ್ತು ಶೈಕ್ಷಣಿಕ ಸರ್ವೇ ಅಡಿಯಲ್ಲಿ ಜಾತಿಗಣತಿ ನಡೆಸಿವೆ.
ಆದರೆ, ಕರ್ನಾಟಕದಲ್ಲಿ ಈ ವಿಷಯದಲ್ಲಿ ಗೊಂದಲವಾಗಿತ್ತು. ಇದು ಸರಿಯಾಗಿ ಮಾಡಿಲ್ಲ, ಕಾನೂನುಬದ್ಧವಾಗಿ ಇಲ್ಲ. ಪ್ರತಿ ಮನೆಗೆ ಹೋಗಿಲ್ಲ ಹಾಗೂ ಎಲ್ಲ ಜಾತಿಯ ಗಣತಿ ಸರಿಯಾಗಿ ನಡೆದಿಲ್ಲ ಎಂಬ ಕೂಗು ಕೇಳಿಸಿತ್ತು ಎಂದರು.
ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
ಕಾಂಗ್ರೆಸ್ ಸರ್ಕಾರ ಈ ವಿಷಯದಲ್ಲಿ ಗೊಂದಲ ನಿರ್ಮಾಣ ಮಾಡಿತ್ತು. ಸಮಾಜದಲ್ಲಿ ಗೊಂದಲ, ಜಾತಿಗಳ ನಡುವೆ ಗೊಂದಲಕ್ಕೆ ಕಾರಣವಾಗಿತ್ತು. ಇದಕ್ಕೆಲ್ಲ ಅಂತ್ಯ ಕಾಣಿಸಲು ಮತ್ತು ತೆರೆ ಎಳೆಯಲು ಕೇಂದ್ರ ಸರ್ಕಾರ ಸ್ಪಷ್ಟ, ವೈಜ್ಞಾನಿಕ ಹಾಗೂ ಕಾನೂನುಬದ್ಧ,
ಅಧಿಕಾರದ ಭಾಗವಾಗಿ ಜಾತಿ ಗಣತಿಯನ್ನು ಮಾಡಲಿದೆ. ವ್ಯವಸ್ಥಿತವಾಗಿ ಇದು ನಡೆಯಲಿದೆ ಎಂದು ಹೇಳಿದರು. ಸಮಾಜದ ಎಲ್ಲರ ಸ್ಥಿತಿಗತಿ ಗೊತ್ತಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಜೆಪಿ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.