ಇಂಡಿಯನ್ ಪ್ರೀಮಿಯರ್ ಲೀಗ್ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.2 ಓವರ್ಗಳಲ್ಲಿ 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ಗಳಲ್ಲಿ 194 ರನ್ ಬಾರಿಸಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ.
ಇದರ ನಡುವೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ ದಂಡದ ಶಿಕ್ಷೆ ನೀಡಲಾಗಿದೆ. ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
ಇಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಈ ಬಾರಿ ರಿಯಾನ್ ಪರಾಗ್ ಹಾಗೂ ಸಂಜು ಸ್ಯಾಮ್ಸನ್ ಮುನ್ನಡೆಸಿದ್ದಾರೆ. ಈ ವೇಳೆ ಇಬ್ಬರು ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಾರೆ. ಅದರಂತೆ ಒಟ್ಟು 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ 6 ತಂಡಗಳ 7 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ದಂಡ ಕಟ್ಟಿಸಿಕೊಳ್ಳಲು ಮುಖ್ಯ ಕಾರಣ ಸ್ಲೋ ಓವರ್ ರೇಟ್ ತಪ್ಪು. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.