ಬೀದರ್: ಅಂಡರ್ವರ್ಲ್ಡ್ ಸೇರಿದಂತೆ ಹಲವು ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಬೀದರ್ನಲ್ಲಿ ಮಾತನಾಡಿದ ಅವರು, ಪಿಎಫ್ಐನಿಂದ ಯುಟಿ ಖಾದರ್ಗೆ ಜೀವ ಬೆದರಿಕೆ ಬಂದಿದೆ ಎಂಬ ಅನುಪಮಾ ಶೆಣೈ ಹೇಳಿಕೆಗೆ ಪ್ರತಿಕ್ರಿಯಿಸಿದರು. ನನಗಾಗಿ ಮಂಗಳೂರಿನಲ್ಲಿ ಎನ್ಐಎ ಸ್ಥಾಪನೆ ಮಾಡುವುದು ಬೇಡ, ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ. ಎಲ್ಲಿ ಹುಟ್ಟಬೇಕು? ಎಲ್ಲಿ ಸಾಯಬೇಕು? ಅದನ್ನ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ದೇವರು ಮಾಡಿಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.
ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ; ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ
ಪಹಲ್ಗಾಮ್ ದಾಳಿ ಖಂಡಿಸಿ ಮಾತನಾಡಿದ ಅವರು, ಕೃತ್ಯವನ್ನು ದಾಳಿಕೋರರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಅದರ ಹಿಂದೆ ಯಾರಿದ್ದಾರೋ ಅವರನ್ನು ಮಟ್ಟ ಹಾಕುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಕೇಂದ್ರದಿಂದ ಜನಗಣತಿ ಜೊತೆಗೆ ಜಾತಿಗಣತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ಕೇಂದ್ರ ಮತ್ತು ರಾಜ್ಯಕ್ಕೆ ಬಿಟ್ಟಿದ್ದು, ಆಡಳಿತ ಪಕ್ಷ, ಪ್ರತಿಪಕ್ಷಗಳಿಗೆ ಮಿತ್ರನಾಗಿ ನಾನು ಸ್ಪೀಕರ್ ಆಗಿದ್ದೇನೆ. ನನ್ನ ಬಾಯಿಗೆ ಈಗ ಬೀಗ ಹಾಕಿದ್ದು, ನನ್ನ ಪ್ರಕಾರ ನಾನೂ ಮಾತನಾಡಿದ್ದೇನೆ ಎಂದು ಹೇಳಿದರು.