ಗದಗ : ಪ್ರೀತಿ ಮಾಡೋದಾಗಿ ಹೇಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಆರೋಪಿ ಕಳೆದ ಏಪ್ರಿಲ್ 19ರಂದು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಸ್ನೇಹಿತ ಬಾಲಕಿ ಮೇಲೆ ಅತ್ಯಾಚಾರ ಎಸಗುವ ದೃಶ್ಯವನ್ನು ಮತ್ತೋರ್ವ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬಯಲಿಗೆ ಬಂದಿದ್ದು, ಸದ್ಯ ಪೊಲೀಸರು, ಆರೋಪಿಗಳಾದ ಸಮೀರ್, ಉಮರ್ ಹಾಗೂ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ ಜಾಕೀರ್ ಹುಸೇನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿನ ಘರ್ಷಣೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣವಾಯ್ತ…?
ಈ ಸಂಬಂಧ ಗದಗ ಎಸ್ಪಿ ಬಿ ಎಸ್ ನೇಮಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅಪ್ರಾಪ್ತೆ ಹುಡುಗಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಸಮೀರ್, ಏಪ್ರಿಲ್ 19ರಂದು ಆಕೆಯನ್ನು ಪುಸಲಾಯಿಸಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದೇ ವೇಳೆ ಸಮೀರ್ನ ಗೆಳೆಯ ಉಮರ್ ಸಹ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇನ್ನು ಜಾಕೀರ್ ಹುಸೇನ್ ಎನ್ನುವಾತ ಅತ್ಯಾಚಾರಿಗಳಾದ ಸಮೀರ್, ಉಮರ್ಗೆ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ. ಸದ್ಯ ಪೋಕ್ಸೋ ಕಾಯ್ದೆಯಡಿ ಮೂವರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.