ಬೆಂಗಳೂರು:- ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕತ್ರಿಗುಪ್ಪೆಯ ಎಂ.ಎಂ.ಬಾರ್ ಬಳಿ ಜರುಗಿದೆ.
ಪಹಲ್ಗಾಮ್ ದಾಳಿ ಬೆನ್ನಲ್ಲೇ ಉತ್ತರ ಕನ್ನಡದ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ!
ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇನ್ನು, ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಏಕಾಏಕಿ ಮಳೆ ಬಂದಿದ್ದರಿಂದ ಬಸ್ ನಿಲ್ದಾಣಗಳಲ್ಲಿ ಜನ ಆಶ್ರಯ ಪಡೆಯುತ್ತಿದ್ದಾರೆ. ಬೈಕ್ ಸವಾರರು ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಬಳಿ ನಿಂತಿದ್ದಾರೆ. ಮಳೆಗೆ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಟ್ರಾಫಿಕ್‌ಜಾಮ್ ಉಂಟಾಗಿದೆ.
ಬೆಂಗಳೂರಿನ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.