ಬೆಳಗಾವಿ : ಸಂಸದ ಜಗದೀಶ್ ಶೆಟ್ಟರ್ ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ.
ಅನಿಗೋಳ ಗ್ರಾಮದಲ್ಲಿ ಪರಸ್ಪರ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಕಾರ್ಯಕರ್ತನ ಮದುವೆಗೆಂದು ಅದೇ ಮಾರ್ಗದಲ್ಲಿ ಹೋಗುತ್ತಿದ್ದರು. ಈ ವೇಳೆ ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿದ್ದ ಬೈಕ್ ಸವಾರನನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ; ತೀವ್ರ ಪರಿಶೀಲನೆ
ನವಲಗುಂದ ತಾಲೂಕಿನ ಬಸವರಾಜ್ ರಾಗಿ, ಶಾಂತವೀರ ಪಾಟೀಲ್ ಎಂಬುವರನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೈಲಹೊಂಗಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.