ರಾಯಚೂರು : ಚಾಮರಾಜನಗರ ಬಳಿಕ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬೆದರಿಕೆ ಇಮೇಲ್ ಬಂದಿದೆ. ಅಪರಿಚಿತರಿಂದ ಜಿಲ್ಲಾಧಿಕಾರಿಗಳಿಗೆ ಇಮೇಲ್ ಮುಖಾಂತರ ಬೆದರಿಕೆ ಹಾಕಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದ್ದು, ಎಲ್ಲೆಡೆಯೂ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆಯಿಂದಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಸಿಬ್ಬಂದಿ ಮತ್ತು ಅಲ್ಲಿದ್ದ ಜನರು ಹೊರ ಓಡಿ ಬಂದಿದ್ದಾರೆ.
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ; ತೀವ್ರ ಪರಿಶೀಲನೆ
ಪಹಲ್ಗಾಮ್ ದಾಳಿ, ನಕ್ಸಲ್ ಹತ್ಯೆ ಹಿನ್ನೆಲೆಯಲ್ಲಿ ಬೆದರಿಕೆ ಬಂದಿರುವ ಶಂಕೆ ಬಾಂಬ್ ಸ್ಕ್ವಾಡ್ ಮತ್ತು ಶ್ವಾನದಳ ಸಿಬ್ಬಂದಿ ಇಡೀ ಕಚೇರಿ ಪೂರ್ತಿ ಹುಡುಕಾಟ ನಡೆಸಿದ್ದಾರೆ.