ಬೆಂಗಳೂರು:- ಯತ್ನಾಳ್ ಸವಾಲು ಸ್ವೀಕರಿಸಿ ತಮ್ಮ ಶಾಸಕ ಸ್ಥಾನಕ್ಕೆ ಇಂದು ಶಿವಾನಂದ ಪಾಟೀಲ್ ಅವರು ರಾಜೀನಾಮೆ ಕೊಟ್ಟಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, ಯತ್ನಾಳ್ ಅವರ ಸವಾಲು ಸ್ವೀಕಾರ ಮಾಡಿ ಸ್ಪೀಕರ್ ಅವರಿಗೆ ರಾಜೀನಾಮೆ ನೀಡಿದ್ದೇನೆ. ಪಕ್ಷಕ್ಕೂ, ಸಿಎಂಗೂ ಇದು ಸಂಬಂಧಿಸಿಲ್ಲ ಎಂದು ಹೇಳಿದರು.
ಸಂಸ್ಕಾರ, ಸಂಸ್ಕೃತಿ ಯೋಗಾಭ್ಯಾಸ ಬೆಳೆಸಿಕೊಂಡರೆ ಮಾತ್ರ ಉಳಿಗಾಲ ; ಶಿವಶಂಕರ ಶ್ರೀ
ಡೆಡ್ ಲೈನ್ ಫಿಕ್ಸ್ ಮಾಡಿದ್ದು ಯತ್ನಾಳ್. ಶುಕ್ರವಾರದೊಳಗೆ ರಾಜೀನಾಮೆ ಕೊಡದಿದ್ದರೆ ಅವರಪ್ಪನಿಗೆ ಹುಟ್ಟಿಲ್ಲ ಎಂದಿದ್ದರು. ಅದಕ್ಕೆ ಈಗ ನಾನು ರಾಜೀನಾಮೆ ನೀಡಿದ್ದೇನೆ. ಹೀಗಾಗಿ ಯತ್ನಾಳ್ ಕೂಡ ರಾಜೀನಾಮೆ ಕೊಡಲಿ. ವಿಜಯಪುರದಲ್ಲಾದ್ರೂ ಸರಿ, ಬಸವನಬಾಗೇವಾಡಿಯಲ್ಲಾದ್ರೂ ಸರಿ ಅವರ ಎದುರು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.
ಯತ್ನಾಳ್ ಅವರ ತಂದೆ ತಾಯಿಗಳಿಗೆ ಹುಟ್ಟಿದ್ದಾರೆ. ನಾನು ಆ ಮಾತುಗಳನ್ನ ಆಡಲ್ಲ. ಆದರೆ ನನ್ನ ಪೂರ್ವಜರ ಬಗ್ಗೆ ಪಾಟೀಲ್ ಹೆಸರಿನ ಬಗ್ಗೆ ಮಾತನಾಡಿದ್ದಕ್ಕೆ ನೋವಾಗಿದೆ ಎಂದು ಬೇಸರ ಹೊರ ಹಾಕಿದರು.
ನನ್ನ ಪೂರ್ವಜರು ಹಿಂದೆ ಬೇರೆ ಅಡ್ಡ ಹೆಸರು ಇಟ್ಟುಕೊಂಡಿರಬಹುದು ಗೊತ್ತಿಲ್ಲ. ನನಗೆ ಹುಟ್ಟಿನಿಂದ ಪಾಟೀಲ್ ಅಂತಾ ಹೆಸರು ಇಟ್ಟಿದ್ದಾರೆ. ವೈಯುಕ್ತಿಕವಾಗಿ ತೇಜೋವಧೆ ಮಾಡಿದ್ದಾರೆ. ಮಾತುಗಳನ್ನು ಸಹಿಸಲು ಆಗಲ್ಲ ಎಂದು ಸಿಟ್ಟು ಹೊರಹಾಕಿದರು.