ಬೆಳಗಾವಿ : ರಾಜ್ಯಾದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಪುರ ಗ್ರಾಮದ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ ರಾಜ್ಯದ ಟಾಪರ್ಗಳಲ್ಲಿ ಒಬ್ಬರಾಗಿದ್ದಾರೆ.
ಇತ್ತೀಚಿಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
SSLC RESULT ; ಟಾಪರ್ ಪಟ್ಟಿಯಲ್ಲಿ ತುಮಕೂರಿನ ಇಬ್ಬರು ವಿದ್ಯಾರ್ಥಿಗಳು
ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡ ರೂಪಾ ಪಾಟೀಲ ಕೃಷಿ ಕುಟುಂಬದಿಂದ ಬಂದು, ಈಗ ಸಾಧನೆ ಮಾಡಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎನ್. ಪ್ಯಾಟಿ ಅವರು ರೂಪಾ ಪಾಟೀಲ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.