ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ವಿಧಾನಸೌಧ, ಮೆಜೆಸ್ಟಿಕ್ ಸೇರಿ ಹಲವೆಡೆ ಭಾರೀ ಮಳೆ ಆಗಿದೆ.
SSLC RESULT ; ಟಾಪರ್ ಪಟ್ಟಿಯಲ್ಲಿ ತುಮಕೂರಿನ ಇಬ್ಬರು ವಿದ್ಯಾರ್ಥಿಗಳು
ನಗರದ ಕೆ.ಆರ್.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.
ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.