ನವದೆಹಲಿ: ಹವಾಮಾನ ಇಲಾಖೆ ದೆಹಲಿ-NCR ಪ್ರದೇಶ ಸೇರಿದಂತೆ ವಾಯುವ್ಯ ಭಾರತ ಹಾಗೂ ಪೂರ್ವ ಮತ್ತು ಮಧ್ಯ ಭಾರತದಲ್ಲಿ ಭಾರೀ ಮಳೆಯ ನಿರೀಕ್ಷೆ ಇದ್ದು, ಮುಂದಿನ ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ವಾರವಿಡೀ ಈ ಪ್ರದೇಶಗಳಲ್ಲಿ ಭಾರೀ ಮಳೆ ಜೊತೆಗೆ ಮಿಂಚು, ಆಲಿಕಲ್ಲು ಮತ್ತು ಬಲವಾದ ಗಾಳಿ ಬೀಳುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ, ದೆಹಲಿಯ ಸಫ್ದರ್ಜಂಗ್ ನಿಲ್ದಾದಣದಲ್ಲಿ 77 ಮಿಮೀ ಮಳೆಯಾಗಿದ್ದು, ಇದು 1901 ರಿಂದ ಮೇ ತಿಂಗಳಿನಲ್ಲಿ ಸುರಿದ ಎರಡನೇ ಅತಿ ಹೆಚ್ಚು ಮಳೆಯಾಗಿದೆ. ಮೇ 20, 2021 ರಂದು ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ ದಾಖಲಾಗಿದ್ದ 119.3 ಮಿಮೀ ಅತ್ಯಧಿಕ ಮಳೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಬ್ಬರ ; ಮನೆ ಕುಸಿದು ನಾಲ್ವರ ದುರ್ಮರಣ
“ತೌಕ್ತೆ” ಚಂಡಮಾರುತದ ಗುಜರಾತ್ ಕರಾವಳಿಯನ್ನು ದಾಟಿದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಗುಡುಗು ಸಹಿತ ಭಾರಿ ಮಳೆಯಾದ ನಂತರ, ದೆಹಲಿ-ಎನ್‌ಸಿಆರ್‌ನಲ್ಲಿ ಕನಿಷ್ಠ ತಾಪಮಾನವು 8°C ಯಷ್ಟು ಕಡಿಮೆಯಾಗಿದೆ. ಐಎಂಡಿ ವರದಿಗಳ ಪ್ರಕಾರ, ದೇಶದ ಪ್ರಮುಖ ಪ್ರದೇಶಗಳಲ್ಲಿ ನಿರಂತರ ಮಳೆ, ಗುಡುಗು ಸಹಿತ ಮಳೆ ಮತ್ತು ಮಿಂಚು ಉಂಟಾಗುತ್ತದೆ. ಈ ಹವಾಮಾನ ವ್ಯವಸ್ಥೆಗಳು ವಾರವಿಡೀ ಸಕ್ರಿಯವಾಗಿರುವ ನಿರೀಕ್ಷೆಯಿದೆ.
ಹೀಗಾಗಿ ಅಪಾಯಕಾರಿ ಹವಾಮಾನಕ್ಕೆ ಮುಂಚಿತವಾಗಿ ವಿಶೇಷವಾಗಿ ನಗರ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿನ ದುರ್ಬಲ ಪ್ರದೇಶಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಐಎಂಡಿ ಸೂಚಿಸಿದೆ.