ರಾಮನಗರ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣ ಮಾಸುವ ಮುನ್ನವೇ ರಾಮನಗರದಲ್ಲಿ ಮತ್ತೊಬ್ಬ ರೌಡಿಶೀಟರ್ ಹತ್ಯೆ ನಡೆದಿದೆ. ರೌಡಿಶೀಟರ್ವೊಬ್ಬನನ್ನ ಲಾಂಗು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾರೋಹಳ್ಳಿ ಪಟ್ಟಣದ ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ನಡೆದಿದೆ.
ರೌಡಿಶೀಟರ್ ಸಂತೋಷ್ (33) ಅಲಿಯಾಸ್ ಕರಡಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಈತ ಬೆಂಗಳೂರಿನ ನಿವಾಸಿಯಾಗಿದ್ದು, ಬೆಂಗಳೂರಿನ ಹಲವು ಠಾಣೆಗಳಲ್ಲಿ ಮೃತ ವ್ಯಕ್ತಿ ಮೇಲೆ ಕ್ರಿಮಿನಲ್ ಕೇಸ್ ಗಳಿದ್ದವು. ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೊದಲಿಗೆ ಕಾರಿನಿಂದ ಬೈಕ್ಗೆ ಗುದ್ದಿ ಆಕ್ಸಿಡೆಂಟ್ ಮಾಡಿ, ಆತ ಕೆಳಗೆ ಬಿದ್ದ ಬಳಿಕ ಲಾಂಗು ಮಚ್ಚು ಹಿಡಿದು ಅಟ್ಟಾಡಿಸಿ ಹತ್ಯೆ ಮಾಡಿಲಾಗಿದೆ. ನಾಲ್ವರು ದುಷ್ಕರ್ಮಿಗಳು ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಕೇಸ್; ಬಂಧಿತರ ಹಿನ್ನೆಲೆ ಏನು..?
ಘಟನಾ ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿದ್ದು,, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಹಾರೋಹಳ್ಳಿ ಠಾಣಾ ಪೊಲೀಸರು, ಸಿಸಿಟಿವಿ ವಿಡಿಯೋ ಆಧರಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.