ಬೆಂಗಳೂರು: ತಿರುಪತಿಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದ್ದು, ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2 ಲಕ್ಷ ಹಣದ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ ವ್ಯಕ್ತಿ
ಬೆಂಗಳೂರು ಮತ್ತು ತಮಿಳುನಾಡಿನ ಹೊಸೂರು ಮೂಲದ ಸಂತ್ರಸ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಎರ್ಟಿಗಾದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ನಿವಾಸಿಗಳಾದ ವಿಜಯಲಕ್ಷ್ಮಿ (50), ಸಹನಾ ಬಿ ಎಸ್ (34), ರಜನಿ ಎಸ್ ಆರ್ (27), ಮತ್ತು ಆರ್ ಲೇಖನ್ ಗೌಡ (11) ಮತ್ತು ಹೊಸೂರಿನ ಚಾಲಕ ತ್ಯಾಗರಾಜನ್ (48) ಎಂದು ಗುರುತಿಸಲಾಗಿದೆ.