ಚಿಕ್ಕೋಡಿ:- ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಜನರಿಗೆ ಭಯ ಹುಟ್ಟಿಸಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕಾಟಾಬಳಿ(೨೫), ನಾಗರಾಜ ದ್ಯಾಮಪ್ಪ ಕಟಾಬಳಿ(೨೧) ಎಂದು ಗುರುತಿಸಲಾಗಿದೆ. ಆರೋಪಿಗಳು, ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದ ಬಳಿ, ತಲ್ವಾರ್ ಕೈಯಲ್ಲಿ ಹಿಡಿದು ಓಡಾಡಿದ್ದರು. ಅಲ್ಲದೇ ಜನರನ್ನ ನಿಂದಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದರು.
ವಿಷಯ ತಿಳಿದ ಯಮಕನಮರಡಿ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.