ದೊಡ್ಡಬಳ್ಳಾಪುರ:ತಾಲೂಕಿನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಯನ್ನೆ ಯಾಮಾರಿಸಿರುವ ಘಟನೆ ಬೆಳಕಿಗೆ ಬಂದಿದೆ..
ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ ,ಕುಡಿಯುವ ನೀರು ಇನ್ನು ಹಲವಾರು ಸಮಸ್ಯೆಗಳನ್ನು ಕುರಿತು ಸಾರ್ವಜನಿಕ ಸಂಪರ್ಕ ಇಲಾಕೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.
ಕೂಡಲೇ ಹೆಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಆದರೆ ಪಂಚಾಯ್ತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಎರಡು ತಿಂಗಳಿನ ಹಿಂದೆಯೆ ನೀರಿನ ಸಮಸ್ಯೆ ಬಗೆಹರಿಸಿದ್ದೇವೆ ಗ್ರಾಮದಲ್ಲಿ ಯವುದೇ ಸಮಸ್ಯೆ ಇಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಗೆ ವರದಿ ನೀಡಿ ಕ್ಲೀನ್ ಚಿಟ್ ನೀಡಿ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ ಅಧಿಕಾರಿಗಳನ್ನೇ ಯಾಮರಿಸಿದ್ದಾರೆ ಎಂದು ಗ್ರಾಮಸ್ತರು ಆರೋಪ ಮಾಡಿದ್ದಾರೆ.
ಗ್ರಾಮಸ್ಥ ಹರ್ಷ AIN ಕನ್ನಡದ ಜೊತೆ ಮಾತನಾಡಿ ನಮ್ಮ ಗ್ರಾಮದಲ್ಲಿ ಹಲವಾರು ಸಮಸ್ಯೆಗಳಿವೆ.ಕಳೆದ ಎರಡು ತಿಂಗಳಿನಿಂದ ಗ್ರಾಮದ ಸಮಸ್ಯೆಗಳನ್ನು ಇಮೇಲ್ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದೆವು.ಆದರೆ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸದೇ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು …