ಮಂಗಳೂರು:- ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಹೀಡಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಹಿಂದೆ ಅನೇಕ ಕಾಣದ ಕೈಗಳ ಕೈವಾಡ ಶಂಕೆ ವ್ಯಕ್ತವಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಹತ್ಯೆ ನಡೆಸಲು ನೆರವು ನೀಡುವಂತೆ ಪ್ರಮುಖ ಆರೋಪಿ ಸಫ್ವಾನ್ ಅನೇಕರನ್ನು ಸಂಪರ್ಕಿಸಿದ್ದ. ಆ ಸಂದರ್ಭದಲ್ಲಿ ಜೈಲು, ಜಾಮೀನಿಗೆ ನೆರವಿಗಾಗಿ ಕೈಚಾಚಿದ್ದ ಎನ್ನಲಾಗಿದೆ.
ನುಗ್ಗೆ ಸೊಪ್ಪಿನ ನೀರು ಕುಡಿಯಿರಿ: ಶುಗರ್ ಕಂಟ್ರೋಲ್ ಸೇರಿ ಈ ಆರೋಗ್ಯ ಪ್ರಯೋಜನೆ ಪಡೆದುಕೊಳ್ಳಿ!
ಕೊಲೆ ಮಾಡಿದ ಕೂಡಲೇ ಪೊಲೀಸರಿಗೆ ಶರಣಾಗುವ ಬಗ್ಗೆಯೂ ಹಂತಕರ ಗುಂಪು ಚರ್ಚೆ ನಡೆಸಿತ್ತು. ಹಂತಕರಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಕಾಣದ ಕೈಗಳ ಗುಂಪು ಮಾಡಿತ್ತೇ ಎಂಬ ಬಲವಾದ ಅನುಮಾನ ಸೃಷ್ಟಿಯಾಗಿದೆ.
ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದ. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ತಿಳಿದುಬಂದಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೊಸ ಅಂಶಗಳು ಬೆಳಕಿಗೆ ಬಂದಿವೆ. ಫಾಜಿಲ್ ಸಹೋದರ ಆದಿಲ್ ನೀಡಿದ ಹಣದ ಜೊತೆಗೆ ವಿದೇಶದಿಂದಲೂ ಹಣ ಬಂದಿರುವ ಅನುಮಾನವಿದೆ. ಪೊಲೀಸರು ವಿವಿಧ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಮುಖ ಆರೋಪಿ ಸಫ್ವಾನ್ ಹಲವರನ್ನು ಸಂಪರ್ಕಿಸಿ ಸಹಾಯ ಪಡೆದಿದ್ದಾನೆ ಎಂದು ತಿಳಿದುಬಂದಿದೆ.