ಬೆಂಗಳೂರು: ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದ್ದೀವಿ.
ನಾಗಮೋಹನ್ ದಾಸ್ ಸಮಿತಿ ಇಂದಿನಿಂದ ಗಣತಿದಾರರು, ಮೇಲ್ವಿಚಾರಕರಿಗೆ ತರಬೇತಿ ನೀಡಲಿದ್ದು, ಅವರು ಮನೆ ಮನೆಗೆ ತೆರಳಲಿದ್ದಾರೆ. ಒಳಮೀಸಲಾತಿ ಸಮೀಕ್ಷೆ ಎರಡು ಹಂತಗಳಲ್ಲಿ ನಡೆಯಲಿದೆ. ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು.
ಇನ್ನೂ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ನಿಖರವಾದ ವರದಿ ಕೊಡಲು ಈ ಆಯೋಗ ಮಾಡಿದ್ದು, ಆರ್ಟಿಕಲ್ 341 ರ ಪ್ರಕಾರ 101 ಜಾತಿಗಳಿವೆ, ಎಡ- ಬಲ , ಭೋವಿ , ಲಮಾಣಿ, ಕೊರಮ , ಕೊರಚ ಇತರೆ ಜಾತಿಗಳು ಬರುತ್ತವೆ. ಒಳ ಮೀಸಲಾತಿ ಕೊಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಎಂಬುದಾಗಿ ಎಡಗೈ ಹಾಗೂ ಬಲಗೈ ಸಮುದಾಯದವರು ಬರೆಸಿರುತ್ತಾರೆ ಎಂದು ಹೇಳಿದರು.