ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆ ಅವರು ನಟಿಸಿದ್ದ ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಅಂತಾ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.