ಆನೇಕಲ್ : ನಿಗೂಢ ಸ್ಫೋಟಕ್ಕೆ ಕಾಂಕ್ರೆಟ್ ರಸ್ತೆ ಛಿದ್ರ ಛಿದ್ರ ವಾಗಿರುವ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ದ ಬನಹಳ್ಳಿಯಲ್ಲಿ ನಡೆದಿದೆ. ಸ್ಪೋಟದ ಜೊತೆಗೆ ಬೆಂಕಿ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಸ್ಪೋಟದ ತೀವ್ರತೆಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ಛಿದ್ರ ಛಿದ್ರವಾಗಿದೆ.
ಮನೆಯ ಹೊರಗಡೆ ಕುಳಿತ್ತಿದ್ದರು ಆತಂಕದಿಂದ ಮನೆಗಳ ಒಳಗೆ ಓಡಿ ಹೋಗಿದ್ದಾರೆ. ಸ್ಫೋಟಕ್ಕೂ ಕೆಲ ಕ್ಷಣದ ಮೊದಲು ವಾಟರ್ ಟ್ಯಾಂಕರ್ ಒಂದು ಆ ರಸ್ತೆಯಲ್ಲಿ ಹಾದು ಹೋಗಿತ್ತು. ಟ್ಯಾಂಕರ್ ಮುಂದಕ್ಕೆ ಸಾಗುತ್ತಿದ್ದಂತೆಯೇ ಭಾರಿ ಶಬ್ದ ಮತ್ತು ಬೆಂಕಿ ಜೊತೆ ರಸ್ತೆ ಸ್ಫೋಟಗೊಂಡಿತು.
ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!
ಈ ರಸ್ತೆಯಲ್ಲಿ ನಿತ್ಯ ಸಾವಿರಾರು ಮಂದಿ ಸಂಚರಿಸುತ್ತಾರೆ. ರಸ್ತೆ ಮೇಲೆ ಹಾದುಹೋಗಿರುವ ಹೈವೋಲ್ಟೆಜ್ ವಿದ್ಯುತ್ ತಂತಿ ತೀರಾ ಕೆಳಗೆ ಜೋತು ಬಿದ್ದಿದೆ. ಅದರಿಂದಲೇ ಇಂತಹ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.