ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ಅನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಒವುಸು ಕಾಲಿನ್ಸ್ ಘಾನಿಯನ್ (35), ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಬಿದರಹಳ್ಳಿಯಲ್ಲಿ ಆರೋಪಿ ಒವುಸು ಕೊಲಿನ್ಸ್ ಘಾನಿಯನ್ ವಾಸವಾಗಿದ್ದನು.
ಮೆಡಿಕಲ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಆರೋಪಿಯಾಗಿದ್ದು, ಈ ಹಿಂದೆ ಮಾರತ್ ಹಳ್ಳಿ ಪೊಲೀಸರಿಂದ ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಗಿದ್ದನು. ಪೊಲೀಸರು ನಂತರ ಸ್ವದೇಶಕ್ಕೆ ವಾಪಸ್ ಕಳಿಸಿದ್ದರು.
ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!
ಆದ್ರೆ ಮತ್ತೆ ಭಾರತಕ್ಕೆ ಬಂದಿದ್ದ ಆರೋಪಿ ಡ್ರಗ್ಸ್ ಮಾರಾಟ ಮಾಡುತ್ತಿದ್ದನು. ಇನ್ನೂ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 50 ಲಕ್ಷ ರೂ. ಮೌಲ್ಯದ ಎಂಡಿಎಂಎ, 15 ಸಾವಿರ ನಗದು, ತೂಕದ ಯಂತ್ರ, ಕಾರು, ಬೈಕ್ ವಶಕ್ಕೆ ಪಡೆಯಲಾಗಿದೆ.