ಇಂಡಿಯನ್ ಪ್ರೀಮಿಯರ್ ಲೀಗ್ನ 52ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ (62), ಜೇಕಬ್ ಬೆಥೆಲ್ (55) ಹಾಗೂ ರೊಮಾರಿಯೊ ಶೆಫರ್ಡ್ (53) ಅರ್ಧಶತಕ ಬಾರಿಸಿ ಮಿಂಚಿದ್ದರು.
ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!
ಈ ಅರ್ಧಶತಕಗಳ ನೆರವಿನೊಂದಿಗೆ ಆರ್ಸಿಬಿ ತಂಡ 20 ಓವರ್ಗಳಲ್ಲಿ 213 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ಣೈ ಸೂಪರ್ ಕಿಂಗ್ಸ್ ಪರ ಆಯುಷ್ ಮ್ಹಾತ್ರೆ 94 ರನ್ ಬಾರಿಸಿದರೆ, ರವೀಂದ್ರ ಜಡೇಜಾ ಅಜೇಯ 77 ರನ್ ಸಿಡಿಸಿದ್ದರು. ಇದಾಗ್ಯೂ ಅಂತಿಮ ಓವರ್ನಲ್ಲಿ 15 ರನ್ಗಳ ಗುರಿ ಪಡೆದ ಸಿಎಸ್ಕೆ ತಂಡವು 2 ರನ್ನಿಂದ ಸೋಲೊಪ್ಪಿಕೊಂಡಿತು.
ಈ ಗೆಲುವನ್ನು ಅಭಿಮಾನಿಗಳು ಎಷ್ಟರ ಮಟ್ಟಿಗೆ ಸಂಭ್ರಮಿಸಿದರು ಅಂದ್ರೆ ಕಪ್ ಗೆದ್ದಷ್ಟೇ ಖುಷಿ ಪಟ್ಟರು. ಆದ್ರೆ ಇಲ್ಲಿನ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ ಚೆನ್ನೈ ವಿರುದ್ಧ ಬೆಂಗಳೂರು ಗೆದ್ದ ಖುಷಿಯಲ್ಲಿ ಕೊಹ್ಲಿ ಬ್ಯಾನರ್ ಮುಂದೆ ಮೇಕೆ ಬಲಿಕೊಟ್ಟು ಸಂಭ್ರಮಿಸಿದ್ದಾರೆ.
ಹೌದು, ಮೊಳಕಾಲ್ಮೂರು ತಾಲೂಕಿನ ಮಾರಮ್ಮನಹಳ್ಳಿ ಗ್ರಾಮದಲ್ಲಿ ಆರ್ಸಿಬಿ ಅಭಿಮಾನಿಗಳು ಮಚ್ಚಿನಿಂದ ಮೇಕೆಯನ್ನು ಕಡಿದು ಕೊಹ್ಲಿ ಪೊಸ್ಟರ್ಗೆ ರಕ್ತಾಭಿಷೇಕ ಮಾಡಿದ್ದಾರೆ. ಇದೇ ದೃಶ್ಯವನ್ನು ತಮ್ಮ ಫೋನ್ನಲ್ಲಿ ಸೆರೆ ಮಾಡಿಕೊಂಡು call-me-143-kalki ಹೆಸರಿನ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಶಾಕ್ ಆಗಿದ್ದಾರೆ. ಅಲ್ಲದೆ ಕೇಸ್ ದಾಖಲಿಸಿ ತನಿಖೆಗೆ ಇಳಿದಿದ್ದಾರೆ.