ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯದ ಫಾಕ್ಸ್ ಕಾನ್ ಸಮೀಪ ಇಂದು ಮಧ್ಯಾಹ್ನ ಸುಮಾರು 2 ಗಂಟೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದ ಚೆನ್ನಕೇಶವ (22) ಮೃತ ದುರ್ದೈವಿ.ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು,
ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!
ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಫಾಕ್ಸ್ ಕಾನ್ ಕಂಪನಿಗೆ ಯುವತಿಯನ್ನು ಬಿಡಲು ಹೋದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಸದ್ಯ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದ್ದು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.