Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಇಂದು ದೇಶದಾದ್ಯಂತ ಮಾಕ್ ಡ್ರಿಲ್: ಬೆಂಗಳೂರಲ್ಲೂ ಮೊಳಗಲಿದೆ ಯುದ್ಧದ ಸೈರನ್! ಇಲ್ಲಿದೆ ಕಂಪ್ಲೀಟ್ ಮಾಹಿತಿ!

    By AIN AuthorMay 7, 2025
    Share
    Facebook Twitter LinkedIn Pinterest Email
    Demo

    ನವದೆಹಲಿ/ ಬೆಂಗಳೂರು:- ಭಾರತ-ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ದಟ್ಟವಾಗಿ ಆವರಿಸ್ತಿದೆ. ಉಗ್ರರು ಪಹಲ್ಗಾಮ್​ನಲ್ಲಿ 26 ಹಿಂದೂಗಳ ನರಮೇಧ ಮಾಡ್ತಿದ್ದಂತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಸತತ 11ನೇ ರಾತ್ರಿಯೂ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸ್ಟೇಷನ್​ಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತ ಪ್ರತಿದಾಳಿ ಕೂಡ ನಡೆಸಿದೆ. ಈಗ ಮತ್ತೊಂದು ಲೆವೆಲ್​ಗೆ ಪ್ರತೀಕಾರವನ್ನು ಕೊಂಡೊಯ್ಯಲು ಭಾರತ ಸರ್ಕಾರ ಮುಂದಾಗಿದೆ. ಇಂದು ದೇಶಾದ್ಯಂತ ಮಾಕ್ ಡ್ರಿಲ್‌ ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ

    ದೇಶಾದ್ಯಂತ ಮಾಕ್ ಡ್ರಿಲ್: ಇಂದು ಸಂಜೆ ಬೆಂಗಳೂರಿನಲ್ಲಿ ಇರಲ್ಲ ಕರೆಂಟ್!

    ಎಸ್, ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್​ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ. ಪಾಪಿ ಪಾಕಿಸ್ತಾನದ ವಿರುದ್ಧ ಸಮರ ಸಾರಲು ಭಾರತ ಸರ್ವ ಸನ್ನದ್ಧವಾಗಿದ್ದು, ಇಂದು ದೇಶಾದ್ಯಂತ 259 ಸ್ಥಳಗಳಲ್ಲಿ ಮಾಕ್​ ಡ್ರಿಲ್​ಗೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಾಕ್​ ಡ್ರಿಲ್​ಗೆ ಸಿದ್ಧತೆಗಳು ನಡೆದಿವೆ. ಹಾಗಾದ್ರೆ, ಏನಿದು ಮಾಕ್​​ ಡ್ರಿಲ್? ಬೆಂಗಳೂರಿನಲ್ಲಿ ಎಷ್ಟಿವೆ? ಮತ್ತು ಎಲ್ಲೆಲ್ಲಿ ಮಾಕ್ ಡ್ರಿಲ್​ ನಡೆಯಲಿದೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

    ರಾಜ್ಯದ ಮೂರು ಜಿಲ್ಲೆಗಳಲ್ಲಿ ಯುದ್ಧದ ಅಣುಕು ಪ್ರದರ್ಶನ ಮಾಡಲು‌ ನಿರ್ಧಾರ ಮಾಡಲಾಗಿದೆ ಎಂದು ಅಗ್ನಿಶಾಮಕ ದಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ತಿಳಿಸಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದ್ದು, ಈ ಬಗ್ಗೆ ಈಗ ಕೇಂದ್ರ ಅಗ್ನಿಶಾಮಕ ದಳ , ಸಿವಿಲ್ ಡಿಫೈನ್ಸ್ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದೆ‌ ಎಂದಿದ್ದಾರೆ.. ..

    ಬೆಂಗಳೂರಿನಲ್ಲಿ ರಕ್ಷಣಾ ಇಲಾಖೆ ಸಂಬಂಧಿಸಿದಂತೆ ಹೆಚ್ಚು ಬೇಸ್ ಗಳು ಹಾಗೂ ಕಚೇರಿಗಳಿದ್ದು, ಸಂಜೆ 4 ಗಂಟೆ ಮಾಡಲು ನಿರ್ಧಾರ ಮಾಡಲಾಗಿದೆ. NCC, NSS, ಸಿವಿಲ್‌ ಡಿಫೈನ್ಸ್, ಡಾಕ್ಟರ್ ಗಳು, ಭಾಗಿಯಾಗುತ್ತಾರೆ. ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ದಳ ಪೊಲೀಸ್ ಠಾಣೆಗಳ ಮೇಲೆ ಸೈರನ್ ಇರಲಿದೆ. 35 ಕಡೆ ಇದ್ದು, 32 ಕೆಲಸ ಮಾಡುತ್ತಿದೆ.

    ಬೆಂಗಳೂರಿನ 35 ಕಡೆ ಸೈರನ್​ ಇದ್ದು, 32 ಕಡೆ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಸೈರನ್​ ಕಾರ್ಯ ನಿರ್ವಹಿಸುವ ಕಡೆ ಮಾಕ್​ಡ್ರಿಲ್​ ನಡೆಯಲಿದೆ. ಇಂಡಿಯನ್ ಇನ್​ಸ್ಟಿಟ್ಯೂಟ್, ಸಿಕ್ಯುಎಎಲ್​, ಇಎಸ್​ಐ ಆಸ್ಪತ್ರೆ, ಎನ್​ಎಎಲ್​, ಬೆಂಗಳೂರು ಡೈರಿ, ಕೆನರಾ ಬ್ಯಾಂಕ್, SRS ಪೀಣ್ಯ, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಬಾಣಸವಾಡಿ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಠಾಣೆ, ಹಲಸೂರು ಪೊಲೀಸ್ ಠಾಣೆ, ಉಪ್ಪಾರಪೇಟೆ ಪೊಲೀಸ್ ಠಾಣೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಠಾಣೆ, ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆ, ವೈಯಾಲಿಕಾವಲ್​ ಠಾಣೆ, ಹಲಸೂರು ಗೃಹರಕ್ಷಕದಳ ಕೇಂದ್ರ ಕಚೇರಿ, ಪೀಣ್ಯ ಅಗ್ನಿಶಾಮಕ ಠಾಣೆ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕದಳ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಅಂಜನಾಪುರ ಅಗ್ನಿಶಾಮಕ ಠಾಣೆ, ITPL ಅಗ್ನಿಶಾಮಕ ಠಾಣೆ, ಸರ್ಜಾಪುರ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ ಅಗ್ನಿಶಾಮಕ ಠಾಣೆ ಮತ್ತು ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆಯಲ್ಲಿ ನಡೆಯಲಿದೆ.

    54 ವರ್ಷದ ಬಳಿಕ ಮಾಕ್‌ ಡ್ರಿಲ್!
    1971ರ ನಂತರ ಅಂದ್ರೆ 54 ವರ್ಷದ ಬಳಿಕ ದೇಶದಲ್ಲಿ ರಕ್ಷಣಾ ಮಾಕ್ ಡ್ರಿಲ್ ನಡೆಸಲು ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ವಿಶೇಷವಾಗಿದೆ. ಪ್ರಮುಖವಾಗಿ ಕೇಂದ್ರ ಸರ್ಕಾರದಿಂದ ಉತ್ತರ ಭಾರತದ ರಾಜ್ಯಗಳಿಗೆ ಈ ಸೂಚನೆ ನೀಡಲಾಗಿದೆ. 1971ರಲ್ಲಿ ಭಾರತ, ಪಾಕಿಸ್ತಾನ ನಡುವೆ ಯುದ್ಧ ನಡೆದಾಗ ಈ ರಕ್ಷಣಾ ಮಾಕ್ ಡ್ರಿಲ್ ನಡೆಸಲಾಗಿತ್ತು. ಆದಾದ ಬಳಿಕ ಎಂದೂ ಕೂಡ ದೇಶದಲ್ಲಿ ರಕ್ಷಣಾ ಮಾಕ್ ಡ್ರಿಲ್ ನಡೆಸಿಲ್ಲ. ಕಾರ್ಗಿಲ್ ಯುದ್ಧದ ವೇಳೆಯೂ ಮಾಕ್ ಡ್ರಿಲ್ ನಡೆಸಿರಲಿಲ್ಲ. ಪಹಲ್ಗಾಮ್‌ ನರಮೇಧದ ಬಳಿಕ ಭಾರತದ ಪ್ರತೀಕಾರದ ದಾಳಿಯ ಬಳಿಕ ಪಾಕ್ ಕೂಡ ಪ್ರತಿದಾಳಿ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ರಕ್ಷಣಾ ಮಾಕ್ ಡ್ರಿಲ್‌ಗೆ ಕೇಂದ್ರದಿಂದ ಸೂಚನೆ ಸಿಕ್ಕಿದೆ.

    ಈ ಮಾಕ್​ ಡ್ರೀಲ್​ ಮಾಡುವ ಉದ್ದೇಶ ಎನ್ನೆಂದು ನೋಡುವುದ್ದಾರೆ, ಯುದ್ಧದ ವೇಳೆ ದಾಳೆ ನಡೆದ್ರೆ ನಮ್ಮ ರಕ್ಷಣೆ ಹೇಗೆ ಮಾಡಿಕೊಳ್ಳಬೇಕು? ಸೈರನ್​ ಆದ ವೇಳೆಯಲ್ಲಿ ನಾವು ಏನ ಮಾಡಬೇಕು?​​ ಸುರಕ್ಷಿತ ಸ್ಥಳಕ್ಕೆ ಹೇಗೆ ಹೋಗ ಬೇಕು ಯಾವ ವಿಧಾನ. ಸಾವು ನೋವು ಸಂಭವಿಸಿದ್ರೆ ನಮ್ಮ ಚಿಕಿತ್ಸೆ ಹೇಗೆ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಇರುವ ರೋಗಿಗಳು ಹೇಗೆ ಸುರಕ್ಷತವಾಗಿರಬಹುದು? ರಕ್ತನಿಧಿಗಳಲ್ಲಿ ಹಾಗೂ ಆಸ್ಪತ್ರೆಯಲ್ಲಿ ಅಗತ್ಯ ಸಲಕರಣೆ ಚೆಕ್​ ಮಾಡುವುದು. ಬೆಡ್​​, ಮಾತ್ರೆಗಳು, ಔಷಧಿಗಳನ್ನು ಹೇಗೆ ಶೇಕರಣೆ ಮಾಡುವುದು ಎಂದು ನೋಡುವುದು. ಒಂದು ವೇಳೆ ದಾಳಿ ನಡೆದರೆ ಸುರಕ್ಷಿತ​​ ಸ್ಥಳಕ್ಕೆ ಹೇಗೆ ಬೇಗ ಹೋಗಬೇಕು ಎಂದು ನೋಡುವುದು.

    ಮಾಕ್ ಡ್ರಿಲ್ ಆದ್ರೆ ಯುದ್ದ ಗ್ಯಾರಂಟಿ ಅಂತಲೇ ಅರ್ಥ. ಇದು ಯುದ್ದದ ಕೊನೆಯ ಪೂರ್ವ‌ ತಯಾರಿಯಾಗಿರುತ್ತೆ ಪ್ರಧಾನಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಮಾಕ್ ಡ್ರಿಲ್ ಆಗಿದೆ ಅಂತ ನಾಳೆನೇ ಯುದ್ದ ಘೋಷಣೆ ಆಗಲ್ಲ. ಆದ್ರೆ ಕೆಲವೇ ದಿನಗಳಲ್ಲಿ ದಾಳಿ ಆಗುವುದು ಗ್ಯಾರಂಟಿ. ಮಾಕ್ ಡ್ರಿಲ್ ಸಮಯದಲ್ಲಿ ಯುದ್ದದ ಪೂರ್ವ ತಯಾರಿ ಬಗ್ಗೆ ಸಿದ್ದತೆ ಮಾಡಿಕೊಳ್ಳಲಾಗುತ್ತದೆ.

    ಅಣಕು ಕವಾಯತಿನ ಅಡಿಯಲ್ಲಿ ವಾಯುದಾಳಿ ಎಚ್ಚರಿಕೆ ಸೈರನ್‌ಗಳನ್ನು ನಿರ್ವಹಿಸಲಾಗುತ್ತದೆ. ಇದು ಪ್ರಮುಖ ಅಪಾಯ ಮತ್ತು ಶತ್ರು ಚಟುವಟಿಕೆಗಳ ಕುರಿತು ಎಚ್ಚರಿಕೆಯನ್ನು ನೀಡುವುದಕ್ಕೆ ಸಂಬಂಧಿಸಿದ ಒಂದು ಹಂತವಾಗಿದೆ. ಸಂಭವನೀಯ ದಾಳಿಗಳ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ನಾಗರಿಕ ರಕ್ಷಣಾ ತಂತ್ರಗಳಲ್ಲಿ ತರಬೇತಿ ನೀಡಲಾಗುವುದು. ಅಪಘಾತ ತಡೆಗಟ್ಟುವ ವ್ಯವಸ್ಥೆಗಳನ್ನು ಮಾಡಲಾಗುವುದು. ಇದರ ಅಡಿಯಲ್ಲಿ, ಶತ್ರುಗಳ ವೈಮಾನಿಕ ಕಣ್ಗಾವಲು ಅಥವಾ ದಾಳಿಯಿಂದ ನಗರಗಳು ಮತ್ತು ರಚನೆಗಳನ್ನು ಮರೆಮಾಡಲು ತುರ್ತು ಪ್ರೋಟೋಕಾಲ್‌ಗಳನ್ನು ಅಳವಡಿಸಲಾಗುತ್ತದೆ. ಇಂದು ಯುದ್ಧದ ಸೈರನ್ ಮೊಳಗಿಸಲಾಗುತ್ತದೆ ಮತ್ತು ಅಣಕು ಕವಾಯತುಗಳನ್ನು ನಡೆಸಲಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    IPL 2025: ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ: IPL ರದ್ದು!?

    May 8, 2025

    Operation Sindoor: ಬೆಂಗಳೂರಿಗರೇ ಗಮನಿಸಿ.. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ: 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

    May 8, 2025

    Operation Sindoor: ಪ್ರತಿಯೊಂದಕ್ಕೂ ಆಧಾರ ಕೇಳ್ತಿದ್ದವರು ಯಾಕೋ ಸೈಲೆಂಟ್‌ ಆಗ್ಯಾರ: ʻಕೈʼ ನಾಯಕರ ಕಾಲೆಳೆದ ಕಾರಜೋಳ

    May 8, 2025

    ಆಪರೇಷನ್ ಸಿಂಧೂರ್ ದಾಳಿ: ಓ ದೇವರೇ, ಇಂದು ನಮ್ಮನ್ನು ರಕ್ಷಿಸು: ಸಂಸತ್ತಿನಲ್ಲಿ ಕಣ್ಣೀರಿಟ್ಟ ಪಾಕ್ ಸಂಸದ

    May 8, 2025

    ಸಂಜೆ 5:30ಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪತ್ರಿಕಾಗೋಷ್ಠಿ

    May 8, 2025

    ಆಪರೇಷನ್ ಸಿಂಧೂರ್: ರಾಜಕೀಯ, ಪಕ್ಷ ಭೇದ ಬಿಟ್ಟು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ: ಸಚಿವ ಜಿ.ಪರಮೇಶ್ವರ್

    May 8, 2025

    ಆಪರೇಷನ್‌ ಸಿಂಧೂರ: ಗಟ್ಟಿಗಿತ್ತಿ ಕರ್ನಲ್ ಸೋಫಿಯಾ ಬೆಳಗಾವಿ ಸೊಸೆ- ಮನೆಯಲ್ಲಿ ಸಂಭ್ರಮವೋ ಸಂಭ್ರಮ

    May 8, 2025

    ಭಾರತೀಯ ಸಿಂಧೂರದ ಮಹತ್ವ ಸಾರಿದೆ AIR STRIKE: ಮಹೇಶ ಟೆಂಗಿನಕಾಯಿ ಬಣ್ಣನೆ

    May 8, 2025

    ಅಮೃತಸರದ ಗೋಲ್ಡನ್‌ ಟೆಂಪಲ್ ಮೇಲೆ ಪಾಪಿ ಪಾಕ್ ಕಣ್ಣು..ಪಾಕಿಸ್ತಾನ ಸೇನೆ ಕೃತ್ಯ ವಿಫಲಗೊಳಿಸಿದ ಭಾರತೀಯ ಸೇನೆ!

    May 8, 2025

    India-Pakistan: ಪಾಕಿಸ್ತಾನದ ಕ್ಷಿಪಣಿಯನ್ನು ಆಕಾಶದಲ್ಲಿಯೇ ಉಡೀಸ್‌ ಮಾಡಿದ ಭಾರತೀಯ ಸೇನೆ..!

    May 8, 2025

    ಭಾರತದ‌ ಮೇಲೆ ಪಾಪಿ ಪಾಕ್ ದಾಳಿ ವಿಫಲ..ಆ 15 ನಗರಗಳು ಟಾರ್ಗೆಟ್‌ ಮಾಡಿದ್ದೇಕೆ?

    May 8, 2025

    Operation Sindoor: ನಾಳೆ ಕಾಂಗ್ರೆಸ್‌ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.