Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಮಾಯಕ ಹೆಣ್ಮಕ್ಕಳ ತಿಲಕ ಅಳಿಸಿದ ಪ್ರತೀಕಾರವೇ ಈ ‘ಆಪರೇಷನ್ ಸಿಂಧೂರ’!

    By AIN AuthorMay 7, 2025
    Share
    Facebook Twitter LinkedIn Pinterest Email
    Demo

    ನವದೆಹಲಿ:- ಕಳೆದ ಏಪ್ರಿಲ್ 22..ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಗೆ ಸುಮಾರು 28 ಭಾರತೀಯರು ಅಸುನೀಗಿದರು. ಈ ಕರಾಳ ದಿನ ಎಂದೂ ಮರೆಯುವಂತದಲ್ಲ. ಹಿಂದೂಗಳ ಮೇಲೆ ಉಗ್ರರು ತೋರಿದ ಕ್ರೌರ್ಯ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುವಂತೆ ಮಾಡಿದೆ. ಈ ದಾಳಿ ಅನೇಕರ ಕುಂಕುಮವನ್ನು ಅಳಿಸಿತ್ತು. ಮಹಿಳೆಯರ ಕಣ್ಣೀರಿಗೆ ಸಾಕ್ಷಿ ಆಗಿತ್ತು. ಪ್ರತಿ ಕಣ್ಣೀರಿಗೂ ಲೆಕ್ಕ ನೀಡಲಾಗುವುದು ಎಂದು ಭಾರತ ಪ್ರತಿಜ್ಞೆ ಮಾಡಿತ್ತು.

    Operation Sindoor: ಪಹಲ್ಗಾಮ್‌ ನರಮೇಧಕ್ಕೆ ಭಾರತ ಪ್ರತೀಕಾರ: ಪಾಕ್ ನ 9 ಉಗ್ರರ ನೆಲೆಗಳು ಉಡೀಸ್‌!

    ಗುರುಗ್ರಾಮದ ಹಿಮಾಂಶಿ ನರ್ವಾಲ್ ಏಪ್ರಿಲ್ 16ರಂದು ವಿವಾಹ ಆಗಿದ್ದ ತಮ್ಮ ಪತಿ ಲೆಫ್ಟಿನೆಂಟ್ ವಿನಯ್ ಜೊತೆ ಹನಿಮೂನ್ ಗೆ ಬಂದಿದ್ದರು. ಈ ವೇಳೆ ವಿನಯ್ ಅವರನ್ನು ಭೀಕರವಾಗಿ ಉಗ್ರರು ಕೊಂದು ಹಾಕಿದ್ದರು. ಜೈಪುರದ ಪ್ರಿಯಾಂಕಾ ಶರ್ಮಾ ಕೂಡ ಪತಿ ರೋಹಿತ್‌ ಜೊತೆ ಹನಿಮೂನ್ ಗೆ ಬಂದು ಕುಂಕುಮ ಕಳೆದುಕೊಂಡಿದ್ದರು.

    ಶಿಮ್ಲಾ ನಿವಾಸಿ ಅಂಜಲಿ ಠಾಕೂರ್ ಅವರು ತಮ್ಮ ಪತಿ ವಿವೇಕ್ ಠಾಕೂರ್ ಜೊತೆ ಪ್ರವಾಸಕ್ಕೆಂದು ತೆರಳಿದ್ದರು, ಅವರು ಸಹ ಇದೇ ವರ್ಷದ ಏಪ್ರಿಲ್ 12 ರಂದು ವಿವಾಹವಾಗಿದರು. ಉಗ್ರರ ದಾಳಿಗೆ ಪತಿಯನ್ನು ಕಳೆದುಕೊಂಡಿದ್ದರು. ಕರ್ನಾಟಕದ ಮಂಜುನಾಥ ರಾವ್‌ ಮತ್ತು ಭರತ್‌ ಭೂಷಣ್‌ ಅವರು ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು.

    ಮದ್ವೆಯಾಗಿ ವಾರವಾಗುವ ಮುನ್ನವೇ ಹಣೆಯ ಸಿಂಧೂರವನ್ನು ಪಾಪಿಗಳು ಅಳಿಸಿದ್ದರು. ಕಣ್ಣೆದುರೇ ಪತಿಯನ್ನು ಹತ್ಯೆಗೈದು ರಾಕ್ಷಸೀಯ ಕೃತ್ಯ ಎಸಗಿದ್ದರು. ಇದಕ್ಕೆ ʼಅಪರೇಷನ್ ಸಿಂಧೂರʼ ಎನ್ನುವ ಹೆಸರಿನಡಿಯಲ್ಲಿ ಭಾರತ ಪ್ರತೀಕಾರವನ್ನು ತೀರಿಸಿದೆ.

    ಮುಳ್ಳನ್ನು ಮುಳ್ಳಿನಿಂದಲೆ ತಗೆಯಬೇಕು ಎನ್ನುವ ಸೂತ್ರದಡಿ ಆಪರೇಷನ್ ಸಿಂಧೂರಕ್ಕೆ ಭಾರತ ಚಾಲನೆ ನೀಡಿತ್ತು. ಇದರಂತೆ ಭಾರತ ʼಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದೆ.

    ಪಹಲ್ಗಾಮ್‌ ನರಮೇಧಕ್ಕೆ ಭಾರತ ಪ್ರತೀಕಾರ: ಪಾಕ್ ನ 9 ಉಗ್ರರ ನೆಲೆಗಳು ಉಡೀಸ್‌!

    ನವದೆಹಲಿ:- ಇತ್ತೀಚೆಗೆ ಪಹಲ್ಗಾಮ್ ನಲ್ಲಿ ಹಿಂದುಗಳ ಮೇಲೆ ಉಗ್ರರು ನಡೆಸಿದ ಕ್ರೌರ್ಯ ಅದು ಭಾರತ ಮರೆಯುವಂತದ್ದಲ್ಲ. ಇದೇ ಪ್ರತೀಕಾರದ ಜ್ವಾಲೆಯಲ್ಲಿ ಉರಿಯುತ್ತಿರುವ ಭಾರತ ಪಾಕಿಸ್ತಾನದ ಮೇಲೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೇ ಯಾವುದೇ ಕ್ಷಣದಲ್ಲಾದರೂ ಎರಡು ದೇಶಗಳ ಮಧ್ಯೆ ಯುದ್ಧ ನಡೆಯುವ ಸಾಧ್ಯತೆ ಇದೆ.

    ಅದರ ಭಾಗವಾಗಿ ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪಹಲ್ಗಾಮ್‌ ನರಮೇಧಕ್ಕೆ ಪ್ರತೀಕಾರ ತೀರಿಸಿದೆ.

    ಉಗ್ರರ 9 ನೆಲೆಗಳ ಮೇಲೆ ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಒಳಗಡೆ ನುಗ್ಗಿ ಏರ್‌ಸ್ಟ್ರೈಕ್‌ ಮಾಡಿ ಧ್ವಂಸ ಮಾಡಿದೆ. ಭಾರತ ಪಾಕಿಸ್ತಾನದ ಯಾವುದೇ ಮಿಲಿಟರಿ ನೆಲೆಗಳನ್ನು ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಿದ್ದು ವಿಶೇಷ.

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರಬಲ ಪ್ರತಿಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಇಂದು ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ 9 ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿವೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ನಡೆಸಿದ “ಆಪರೇಷನ್ ಸಿಂಧೂರ” ಎಂಬ ಕಾರ್ಯಾಚರಣೆಯು ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ನೆಲೆ ಮತ್ತು ಲಾಹೋರ್ ಮತ್ತು ಸಿಯಾಲ್ಕೋಟ್ ಬಳಿಯ ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾದ ಮರ್ಕಾಜ್‌ನಂತಹ ಪ್ರಮುಖ ಭಯೋತ್ಪಾದಕ ನೆಲೆಗಳ ಮೇಲೆ ನಡೆದಿದೆ.

    9 ಉಗ್ರರ ನೆಲೆಗಳ ಪೈಕಿ ಕೆಲವು 100 ಕಿ.ಮೀ ದೂರದಲ್ಲಿ ಇದ್ದವು. ದಾಳಿಗೊಳಗಾದ ಶಿಬಿರಗಳು ಭಾರತದ ವಿರುದ್ಧದ ಹಿಂದಿನ ಅನೇಕ ದಾಳಿಗಳಿಗೆ ನೇರವಾಗಿ ಸಂಬಂಧಿಸಿವೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ದಾಳಿ ಎಲ್ಲೆಲ್ಲಿ?

    ಮುರಿಡ್ಕೆ: ಸಾಂಬಾ ಎದುರಿನ ಗಡಿಯಿಂದ 30 ಕಿ.ಮೀ ದೂರದಲ್ಲಿದ್ದು ಇದು ಲಷ್ಕರ್-ಎ-ತೈಬಾ ಸಂಘಟನೆ ಉಗ್ರರ ಶಿಬಿರ ನಡೆಸುತ್ತಿತ್ತು. ಮುಂಬೈ ದಾಳಿ ನಡೆಸಿದ ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗಿತ್ತು.

    ಗುಲ್ಪುರ್ : ಗಡಿ ನಿಯಂತ್ರಣ ರೇಖೆ ಪೂಂಚ್-ರಾಜೌರಿಯಿಂದ 35 ಕಿ.ಮೀ ದೂರದಲ್ಲಿದೆ. ಪೂಂಚ್‌ನಲ್ಲಿ ಏಪ್ರಿಲ್ 20, 2023 ರಂದು ನಡೆದ ದಾಳಿ ಮತ್ತು ಜೂನ್ 24 ರಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಯಾತ್ರಿಕರ ಮೇಲೆ ಇಲ್ಲಿ ತರಬೇತಿ ಪಡೆದ ಉಗ್ರರು ದಾಳಿ ನಡೆಸಿದ್ದರು.

    ಸವಾಯಿ: ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು ಗಡಿ ನಿಯಂತ್ರಣ ರೇಖೆಯಿಂದ 30 ಕಿ.ಮೀ ದೂರದಲ್ಲಿದೆ. ಕಳೆದ ವರ್ಷ ಅಕ್ಟೋಬರ್ 20, 24 ರಂದು ಸೋನ್‌ಮಾರ್ಗ್, ಅಕ್ಟೋಬರ್ 24 ರಂದು ಗುಲ್ಮಾರ್ಗ್ ಮತ್ತು ಏಪ್ರಿಲ್ 22 ರಂದು ಪಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರು ಇಲ್ಲಿ ತರಬೇತಿ ಪಡೆದಿದ್ದರು.

    ಬಹವಾಲ್ಪುರ್: ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಬಹವಾಲ್ಪುರ್ ಮೇಲೆ ದಾಳಿ ನಡೆದಿದೆ. ಇದು ಜೈಷ್‌ ಉಗ್ರ ಸಂಘಟನೆಯ ಪ್ರಧಾನ ಕಚೇರಿಯಾಗಿತ್ತು.

    ಬಿಲಾಲ್: ಉಗ್ರ ಸಂಘಟನೆ ಜೈಷ್–ಎ–ಮೊಹಮದ್ ಲಾಂಚ್‌ ಪ್ಯಾಡ್‌ ಇದಾಗಿದ್ದು ಉಗ್ರರು ಇಲ್ಲಿ ಕೊನೆಯ ಹಂತದ ತರಬೇತಿ ಪಡೆದು ಭಾರತಕ್ಕೆ ನುಗ್ಗುತ್ತಿದ್ದರು.

    ಕೋಟ್ಲಿ: ಗಡಿ ನಿಯಂತ್ರಣ ರೇಖೆಯಿಂದ 15 ಕಿ.ಮೀ ದೂರದಲ್ಲಿದೆ. ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು 50 ಉಗ್ರರಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿತ್ತು

    ಕೋಟ್ಲಿ: ಗಡಿ ನಿಯಂತ್ರಣ ರೇಖೆಯಿಂದ 15 ಕಿ.ಮೀ ದೂರದಲ್ಲಿದೆ. ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು 50 ಉಗ್ರರಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿತ್ತು.

    ಬರ್ನಾಲಾ: ಭಾರತ ಗಡಿಯಿಂದ 10 ಕಿ.ಮೀ ದೂರದಲ್ಲಿದೆ. ಇಲ್ಲೂ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಲಾಗುತ್ತಿತ್ತು.

    ಸರ್ಜಲ್: ಸಾಂಬಾ ಕಟುವಾ ಬಳಿ ಅಂತಾರಾಷ್ಟ್ರೀಯ ಗಡಿಯಿಂದ 8 ಕಿಲೋಮೀಟರ್ ದೂರದಲ್ಲಿ ಜೈಶ್ ಎ ಮೊಹಮದ್ ಕ್ಯಾಂಪ್.

    Demo
    Share. Facebook Twitter LinkedIn Email WhatsApp

    Related Posts

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025

    ಮುಸ್ಲಿಂ ತುಷ್ಟೀಕರಣದ ಸಿದ್ಧರಾಮಯ್ಯ ಸರ್ಕಾರಕ್ಕೆ ಕಪಾಳ ಮೋಕ್ಷ: ಪ್ರಮೋದ್ ಮುತಾಲಿಕ್ ಕಿಡಿ

    May 29, 2025

    ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್

    May 29, 2025

    ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಬಿಂದಾಸ್‌ ಟಾಕ್

    May 29, 2025

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    35 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವಾಹಿನಿಯ ರಿಯಲ್‌ ಸ್ಟಾರ್ಸ್ ಅವಾರ್ಡ್ಸ್‌ ಪ್ರದಾನ‌

    May 29, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಸಾಧ್ಯತೆ!

    May 29, 2025

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

    May 29, 2025

    Bengaluru: ಪಕ್ಕದ ಕಾರಿಗೆ ನೀರು ಹಾರಿಸಿದ್ದಕ್ಕೆ ವ್ಯಕ್ತಿಯ ಬೆರಳು ಕಟ್!

    May 29, 2025

    ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 29, 2025

    ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

    May 29, 2025

    ಮದ್ದೂರು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಮಾನತಿಗೆ ಶಾಸಕ ಕೆ.ಎಂ.ಉದಯ್ ಸೂಚನೆ

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.