ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಗಳಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಹತ್ತು ಜನರು ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿವೆ ಮಾಡಿದೆ.
ಪೂಂಚ್ ಜಿಲ್ಲೆಯಲ್ಲಿ ಏಳು ನಾಗರೀಕರು ಸಾವನ್ನಪ್ಪಿದ್ದು, ಇನ್ನೂ 25 ಜನರು ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿ ಹತ್ತು ಜನರು ಗಾಯಗೊಂಡರು ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.