ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ.
ಭಾರತದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ. ಹೀಗಾಗಿ ಪಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಆದರೆ ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
IPL 2025: ತವರಲ್ಲೇ ಕೆಕೆಆರ್ ಗೆ ಆಘಾತ: ಧೋನಿ ಪಡೆಗೆ 2 ವಿಕೆಟ್ ಗಳ ರೋಚಕ ಜಯ!
ಇನ್ನೂ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕ್ ಉಗ್ರರು 26 ಭಾರತೀಯ ನಾಗರೀಕರನ್ನು ಹತ್ಯೆ ಮಾಡಿದ್ದು, ಇದೀಗ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಹೌದು, ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ 9 ಪ್ರದೇಶಗಳ ಮೇಲೆ ವಾಯು ದಾಳಿ ನಡೆಸಿ ಪಾಕಿಸ್ತಾನದ ವಿರುದ್ದ ಸೇಡು ತೀರಿಸಿಕೊಂಡಿದೆ. ಆದರೆ ಇತ್ತ ಪಾಕ್ ಭಾರತದ ದಾಳಿಯಿಂದ ನಲುಗಿ ಹೋಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.