ನವದೆಹಲಿ:- ಜಮ್ಮು- ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಪಡೆಗಳು ನಡೆಸಿದ ಭಾರೀ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಭಾರತೀಯ ಸೇನಾ ಸೈನಿಕನೊಬ್ಬ ಹುತಾತ್ಮನಾಗಿದ್ದಾನೆ.
RCBಯ ಸ್ಪೋಟಕ ಬ್ಯಾಟರ್ ಟೂರ್ನಿಯಿಂದಲೇ ಔಟ್: ಪ್ಲೇ ಆಫ್ ಹೊತ್ತಲ್ಲೇ ಬೆಂಗಳೂರಿಗೆ ಆಘಾತ!
ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಪ್ರಕಾರ, 5 ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಪಾಕಿಸ್ತಾನ ಸೇನೆಯ ಶೆಲ್ ದಾಳಿಯ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದರು.
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕ್ ಸೇನೆ ನಡೆಸಿದ ಶೆಲ್ ದಾಳಿಗೆ ಭಾರತೀಯ ಯೋಧ ದಿನೇಶ್ ಕುಮಾರ್ ಶರ್ಮಾ ಹುತಾತ್ಮರಾಗಿದ್ದಾರೆ.
ಬುಧವಾರ ಅಂದ್ರೆ ನಿನ್ನೆ ತಡರಾತ್ರಿ ಆರಂಭವಾದ ಶೆಲ್ ದಾಳಿಯು ಭಾರತದ ಮುಂಚೂಣಿ ಠಾಣೆಗಳು ಮತ್ತು ಹತ್ತಿರದ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದಿದೆ. ಮೋರ್ಟರ್ ಗುಂಡುಗಳು ಮತ್ತು ಫಿರಂಗಿ ಗುಂಡಿನ ದಾಳಿಗಳು ಹಳ್ಳಿಗಳ ಬಳಿ ಅಪಾಯಕಾರಿಯಾಗಿ ಬಿದ್ದವು. ಭಾರತದ ಇತ್ತೀಚಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯವನ್ನು ಸ್ಪಷ್ಟ ಕದನ ವಿರಾಮ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಪ್ರಚೋದನೆ ಎಂದು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ.
ಹುತಾತ್ಮರಾದ 32 ವರ್ಷದ ಜವಾನ್ ದಿನೇಶ್ ಕುಮಾರ್ ಶರ್ಮಾ, ಹರಿಯಾಣದ ಪಲ್ವಾಲ್‌ನ ಮೊಹಮ್ಮದ್‌ಪುರ ಗ್ರಾಮದವರು. ಅವರು ಪಾಕಿಸ್ತಾನದ ಆಕ್ರಮಣಕ್ಕೆ ಆಗಾಗ್ಗೆ ಒಡ್ಡಿಕೊಳ್ಳುವ ಹೈಟೆನ್ಷನ್ ಪ್ರದೇಶವಾದ ಎಲ್‌ಒಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಸಮರ್ಪಣೆ ಮತ್ತು ಶೌರ್ಯ ಅನುಕರಣೀಯ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.