Close Menu
Ain Live News
    Facebook X (Twitter) Instagram YouTube
    Wednesday, May 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೆಬ್ಬಾಳ-ಏರ್‌ ಪೋರ್ಟ್‌ ಗೆ ಹೊಸ ಫ್ಲೈಓವರ್‌ ನಿರ್ಮಾಣ: ಗಡ್ಕರಿ ಬಳಿ ಕೇಂದ್ರದ ನೆರವು ಕೇಳಿದ ಡಿಕೆಶಿ

    By Author AINMay 8, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಬೆಂಗಳೂರು- ಕನಕಪುರ ನಡುವಣ ರಸ್ತೆ ಆರು ಪಥಕ್ಕೆ ಉನ್ನತೀಕರಣ, ನೆನೆಗುದಿಗೆ ಬಿದ್ದಿರುವ ಕಗ್ಗಲಿಪುರ ಟೋಲ್ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು,  ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಬಿಡುಗಡೆ, ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಏರ್‌ ಪೋರ್ಟ್‌ ರಸ್ತೆಗೆ ಪ್ರತ್ಯೇಕ ಫ್ಲೈಓವರ್ (ಮೇಲ್ಸೇತುವೆ) ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್‌, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

    ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಡಿಕೆಶಿ, ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದರು.

    ಹೆದ್ದಾರಿ 209ರ ಉನ್ನತೀಕರಣ

    ಹಾಲಿ ನಾಲ್ಕು ಪಥ ಇರುವ ಹೆದ್ದಾರಿ 209 (ಬೆಂಗಳೂರು-ಕನಕಪುರ)ನ್ನು ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ಜತೆಗೆ ಆರು ಪಥಗಳಿಗೆ ಉನ್ನತೀಕರಣಗೊಳಿಸಬೇಕು. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಈ ಪ್ರದೇಶದ ಅಭಿವೃದ್ಧಿಯಿಂದ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಗಣನೀಯ ಏರಿಕೆ ಕಂಡಿದೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು, ಸಂಚಾರಿ ಸುರಕ್ಷತೆ, ಕೈಗಾರಿಕಾ ಪ್ರದೇಶದ ವಾಹನಗಳ ಸುಗಮ ಸಂಚಾರಕ್ಕೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

    ಕಗ್ಗಲಿಪುರ ಟೋಲ್ ರಸ್ತೆ ಕಾಮಗಾರಿ

    ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರವಿಶಂಕರ ಗುರೂಜಿ ಆಶ್ರಮದಿಂದ ಕಗ್ಗಲಿಪುರ ಟೋಲ್ ವರೆಗಿನ 7 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಅಗತ್ಯ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಾಗಿದ್ದು, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಆಕ್ಷೇಪದಿಂದ ಈ ಯೋಜನೆ ಕಾಮಗಾರಿ ನಿಂತಿದೆ.

    ಈ ಹೆದ್ದಾರಿಯಲ್ಲಿ ಈ ಭಾಗ ಬಾಟಲ್ ನೆಕ್ ನಂತಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶದಿಂದ ವಾಹನ ಸಂಚಾರ ಹೆಚ್ಚಾಗಿದೆ. ಇದರಿಂದ ಈ ಭಾಗದಲ್ಲಿ ಸುಗಮ ಸಂಚಾರಕ್ಕೆ ಕಾಮಗಾರಿ ಪೂರ್ಣಗೊಳಿಸುವುದು ಅಗತ್ಯವಾಗಿದೆ. ಈ ಕಾಮಗಾರಿಗೆ ಎದುರಾಗಿರುವ ಅಡಚಣೆಯನ್ನು ನಿವಾರಿಸಿ, ಆದಷ್ಟು ಬೇಗ ಯೋಜನೆ ಪೂರ್ಣಗೊಳಿಸಲು ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

    ಸ್ಯಾಟಲೈಟ್ ರಿಂಗ್ ರಸ್ತೆಗೆ ಪರಿಹಾರ

    ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆ (NH 948A) ಡಾಬಸ್ ಪೇಟೆ, ಮಾಗಡಿ, ರಾಮನಗರ, ಹಾರೋಹಳ್ಳಿ ನಡುವೆ ಸಂಪರ್ಕ ವೃದ್ಧಿಸಲು ಹಾಗೂ ಮೂಲಸೌಕರ್ಯ ಒದಗಿಸಲು ಈ ಯೋಜನೆ ಮಹತ್ವದ್ದಾಗಿದೆ. ಈ ಯೋಜನೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ಬಿಡುಗಡೆ ಮಾಡಬೇಕು. ಈ ಯೋಜನೆ 2019ರಲ್ಲಿ ಆರಂಭವಾಯಿತಾದರೂ ಪರಿಹಾರ ಬಿಡುಗಡೆ ತಡವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಯೋಜನೆ ಪ್ರಗತಿ ಕುಂಠಿತವಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

    ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಪಿಜಿಗಳಿಗೆ ಬ್ರೇಕ್ ಹಾಕಲು ಪಾಲಿಕೆ ಸಜ್ಜು!

    ಹೆಬ್ಬಾಳದಿಂದ ಪ್ರತ್ಯೇಕ ಮೇಲ್ಸೇತುವೆ

    ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಣ 35 ಕಿ.ಮೀ ಉದ್ದದ ಪ್ರದೇಶದಲ್ಲಿ ಅಪಾರವಾದ ಅಭಿವೃದ್ಧಿಯಾಗಿದ್ದು, ಅನೇಕ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳು ಸ್ಥಾಪನೆಯಾಗಿವೆ. ಹೀಗಾಗಿ ಈ ಭಾಗದಲ್ಲಿ ಸಂಚಾರ ದಟ್ಟಣೆ ತೀವ್ರವಾಗಿದೆ.

    ಈಗಿರುವ ಎಲಿವೆಟೆಡ್ ಕಾರಿಡಾರ್ ನಡುವೆ ಟ್ರಾಫಿಕ್ ಸಿಗ್ನಲ್, ಪಾದಚಾರಿಗಳ ರಸ್ತೆ ದಾಟುವಿಕೆಯಿಂದ ಇಲ್ಲಿನ ಪ್ರಯಾಣಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ  ಈ ಮಧ್ಯೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತಿ ವೇಗವಾಗಿ ಬೆಳೆಯುತ್ತಿದ್ದು, ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

    ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಹೆಬ್ಬಾಳ ಜಂಕ್ಷನ್ ನಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಮಾಡಬೇಕು. ಇದರಿಂದ ವಿಮಾನ ನಿಲ್ದಾಣ ಪ್ರಯಾಣಿಕರು, ಸ್ಥಳೀಯ ವಾಹನಗಳು, ಕೈಗಾರಿಕಾ ವಲಯದ ದೊಡ್ಡ ವಾಹನಗಳ ಸಂಚಾರ ಸುಗಮವಾಗಲಿದೆ ಎಂದು ಮನವಿ ಮಾಡಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಮಲ್‌ ಹಾಸನ್‌ ಹೊಗಳುತ್ತಲೇ ಡಿಚ್ಚಿ ಕೊಟ್ಟ ನವರಸ ನಾಯಕ ಜಗ್ಗೇಶ್!‌

    May 28, 2025

    Bagalakote: ನಿಗದಿತ ಜಾಗದಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಿ: ರಬಕವಿ ಸಮಸ್ತ ಮಂಡಳಿ ಆಗ್ರಹ!

    May 28, 2025

    ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!

    May 28, 2025

    ಕಮಲ್‌ ಯಡವಟ್ಟು: ಕನ್ನಡ ಭಾಷೆಗೆ ಧಕ್ಕೆ ತರುವ ಮಾತನ್ನು ಒಪ್ಪಲ್ಲ: ಲಾಡ್‌ ಎಚ್ಚರಿಕೆ

    May 28, 2025

    ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ

    May 28, 2025

    ಕನ್ನಡ ಹುಟ್ಟಿದ್ದು ತಮಿಳಿನಿಂದ: ಕಮಲ್ ಹಾಸನ್ ಹೇಳಿಕೆಗೆ ವ್ಯಾಪಕ ವಿರೋಧ.. ಬೆಳಗಾವಿಯಲ್ಲಿ ಪ್ರೊಟೆಸ್ಟ್!

    May 28, 2025

    ಕೌಟುಂಬಿಕ ಕಲಹ: ಹೆಂಡತಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

    May 28, 2025

    Crime News: ಹೆಂಡ್ತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ: ಕೌಟುಂಬಿಕ ಕಲಹದ ಶಂಕೆ!

    May 28, 2025

    ಕಾಂಗ್ರೆಸ್‌ ನಿಂದ ಸೈನಿಕರಿಗೆ ʻಜೈಹಿಂದ್‌ʼ ಗೌರವ: photos

    May 28, 2025

    ಇದೊಂದು ರಾತ್ರೋ ರಾತ್ರಿ ಫೀಲ್ಡ್ ಗಿಳಿಯುವ ಗಂಟುಮೂಟೆ ಗ್ಯಾಂಗ್!

    May 28, 2025

    ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ: ಜನರಲ್ಲಿ ಹೆಚ್ಚಿದ ಆತಂಕ!

    May 28, 2025

    ಮುಂಗಾರು ಅಬ್ಬರ: ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.