ಬೆಳಗಾವಿ: ಪಹಲ್ಗಾಮ್ ದಾಳಿಯಲ್ಲಿ ಭಯೋತ್ಪಾದಕರು ಅಮಾಯಕರ ಮೇಲೆ ಗುಂಡಿನ ದಾಳಿ ನಡೆಸುವಾಗ ಧರ್ಮ ಯಾವುದು ಅಂತಾ ಕೇಳಿದ್ದರು. ಯಾರೆಲ್ಲ ತಾನು ಹಿಂದೂ ಎಂದಿದ್ದರೋ ಅವರನ್ನೆಲ್ಲ ಗುಂಡಿಟ್ಟು ಸಾಯಿಸಿದ್ದರು. ಹೆಂಡತಿ, ಮಕ್ಕಳ ಎದುರಲ್ಲೇ ಬರ್ಬರವಾಗಿ ಮುಗಿಸಿದ್ದರು. ಪಾಕ್ ಬೆಂಬಲಿತ ಉಗ್ರರ ಪೈಶಾಚಿಕ ಕೃತ್ಯಕ್ಕೆ ಒಟ್ಟು 26 ಹೆಣ್ಮಕ್ಕಳು ತಮ್ಮ ಸಿಂಧೂರವನ್ನು ಕಳೆದುಕೊಂಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ನಡೆಸಿದೆ.
ಇನ್ನೂ ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಜಗತ್ತಿಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿ ಜಿಲ್ಲೆಯ ಸೊಸೆ ಎನ್ನುವುದು ಬೆಳಗಾವಿಗರಿಗೆ ಹಮ್ಮೆ ಮೂಡಿಸಿದೆ.
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಲ್ ಸೋಫಿಯಾ ಖುರೇಷಿ ಅವರು, ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರಾದ, ಕರ್ನಲ್ ತಾಜುದ್ದೀನ್ ಬಾಗೇವಾಡಿ ಅವರ ಪತ್ನಿ. ಕರ್ನಲ್ ಸೋಫೀಯಾ ಅವರು ಮೂಲತಃ ಗುಜರಾತ್ ರಾಜ್ಯದ ಬರೋಡಾದವರಾಗಿದ್ದು,
ಇಬ್ಬರೂ ಪರಸ್ಪರ ಪ್ರೀತಿಸಿ 2015 ರಲ್ಲಿ ವಿವಾಹವಾಗಿದ್ದಾರೆ. ಚೆನ್ನೈನ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಪಡೆದರು. ನಂತರ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸೋಫಿಯಾ ನೇಮಕಗೊಂಡರು. ಸೋಫಿಯಾ 2006ರಲ್ಲಿ ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಮಿಲಿಟರಿ ವೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.
2010ರಿಂದ ಮತ್ತೆ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಪಂಜಾಬ್ ಗಡಿಯಲ್ಲಿ ಆಪರೇಷನ್ ಪರಾಕ್ರಮ್ ಸಮಯದಲ್ಲಿ ಸಲ್ಲಿಸಿದ್ದ ಸೇವೆಗಾಗಿ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಅವರಿಂದ ಪ್ರಶಂಸಾ ಪತ್ರವನ್ನು ಸಹ ಪಡೆದಿದ್ದಾರೆ.ಸದ್ಯ ಸೋಫೀಯಾ ಅವರು ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಪತಿ ತಾಜುದ್ದೀನ್ ಬಾಗೇವಾಡಿ ಅವರು ಝಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.