ಬಾಗಲಕೋಟೆ: ಬೈಕ್ʼಗೆ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್ನಲ್ಲಿ ನಡೆದಿದೆ. ಮುರನಾಳ ಗ್ರಾಮದ ನಿವಾಸಿಗಳಾದ ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16) ಮತ್ತು ಕಾಮಣ್ಣ ಕುಪಲಿ (16) ಮೃತ ದುರ್ದೈವಿಗಳಾಗಿದ್ದು,
ಊರಲ್ಲಿ ಹನುಮ ಜಯಂತಿ ಹಿನ್ನೆಲೆ ಡಿಜೆ ಮೆರವಣಿಗೆ ಆಯೋಜಿಸಲಾಗಿತ್ತು. ಹೀಗಾಗಿ ಡಿಜೆ ಮೆರವಣಿಗೆ ನೋಡಲು ಮೂವರು ಬಾಲಕರು ಬೈಕ್ನಲ್ಲಿ ತೆರಳಿದ್ದರು. ಗದ್ದನಕೇರಿ ಕ್ರಾಸ್ನಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಬೈಕ್ಗೆ ಕ್ಯಾಂಟರ್ ಡಿಕ್ಕಿಯಾಗಿದೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಎಡಗಡೆಯಿಂದ ಓವರ್ ಟೇಕ್ ಮಾಡಲು ಹೋಗಿ ಬಾಲಕರ ಯಡವಟ್ಟು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಐವರು ಯುವಕರು ಹೊರಟಿದ್ದರು. ಅವರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ ಆಗಿದ್ದು, ನೇರವಾಗಿ ಕ್ಯಾಂಟರ್ ಅಡಿಗೆ ಸಿಲುಕಿದ್ದಾರೆ.
ಗದ್ದನಕೇರಿ ಕ್ರಾಸ್ನಿಂದ ಹುಬ್ಬಳ್ಳಿ ಮಾರ್ಗವಾಗಿ ಕ್ಯಾಂಟರ್ ಚಾಲಕ ಸರಿಯಾಗಿ ತನ್ನ ಮಾರ್ಗದಲ್ಲಿ ಹೊರಟಿದ್ದ. ಬಾಲಕರ ಎಡವಟ್ಟಿನಿಂದ ಅವಘಡ ಸಂಭವಿಸಿದೆ. ಇನ್ನು ಬಾಲಕರು ಹೆಲ್ಮೆಟ್ ಧರಿಸಿರಲಿಲ್ಲ ಮತ್ತು ತ್ರಿಬಲ್ ರೈಡಿಂಗ್ ಹೊರಟ್ಟಿದ್ದರು.
ಸ್ಥಳದಲ್ಲೇ ಮೂವರು ಬಾಲಕರು ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.