ಶ್ರೀನಗರ:- ಸಿಂಧೂರ್ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಉದ್ಧಟತನ ಮುಂದುವರಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಘರ್ಷಣೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ್ ಸೇರಿದಂತೆ ಕೆಲವು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪಾಕಿಸ್ತಾನವೂ ಡ್ರೋಣ್, ಕ್ಷಿಪಣಿಗಳನ್ನು ಉಡಾಯಿಸಲು ಯತ್ನಿಸಿತ್ತು. ಇದಕ್ಕೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನದ ಡ್ರೋಣ್, ಕ್ಷಿಪಣಿಗಳನ್ನು ಹೊಡೆದುರಳಿಸಿದೆ. ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತ ಪಾಕ್ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಭಾರತ್-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.
ಜಮ್ಮುವಿನ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ: ಪಾಕ್ ರಾಕೆಟ್ ಗಳನ್ನು ಹೊಡೆದುರುಳಿಸಿದ ಭಾರತ!
ಜಮ್ಮು, ಪಂಜಾಬ್, ರಾಜಸ್ಥಾನ ಗುರಿಯಾಗಿಸಿಕೊಂಡು ಪಾಕ್ ದಾಳಿ ಆರಂಭಿಸಿದರೆ, ಭಾರತ ಲಾಹೋರ್, ಇಸ್ಲಾಮಾಬಾದ್ ಮೇಲೆ ದಾಳಿ ನಡೆಸಿದ್ದು, ಅರಬ್ಬೀ ಸಮುದ್ರದಲ್ಲಿಯೂ ನೌಕಾ ಪಡೆ ದಾಳಿ ಆರಂಭಿಸಿದೆ. ಭಾರತದ ಏರ್ ಡಿಫೆನ್ಸ್ ಯೂನಿಟ್‌ನಿಂದ ಪಾಕ್‌ನ ಎಲ್ಲ ಕ್ಷಿಪಣಿಗಳನ್ನು ಉಡೀಸ್ ಮಾಡಿದೆ. ಇಸ್ರೇಲ್ ಮೇಲೆ ಹಮಾಸ್ ದಾಳಿಯ ಮಾದರಿಯಲ್ಲಿ ಪಾಕ್ ಆರ್ಮಿ ದಾಳಿ ನಡೆಸಿದೆ. ಸದ್ಯ ಭಾರತದ ಮೂರು ಪಡೆಗಳಿಂದಲೂ ದಾಳಿ ಆರಂಭವಾಗಿದ್ದು, ಸದ್ಯ ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ