ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮತ್ತೊಮ್ಮೆ ಗಾಲಿ ಜನಾರ್ದನ ರೆಡ್ಡಿ ಲಾಕ್ ಆಗಿದ್ದಾರೆ. ಮೈನಿಂಗ್ ಕೇಸ್ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಸಿಬಿಐ ತನಿಖೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಪರಾಧ ಸಾಬೀತಾಗಿದೆ. ಹೈದರಾಬಾದ್ ಸಿಬಿಐ ಕೋರ್ಟ್ ಜನಾರ್ದನ ರೆಡ್ಡಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ರೆಡ್ಡಿ ಸೇರಿ ಐವರನ್ನ ಸಿಬಿಐ ವಶಕ್ಕೆ ಪಡೆದು ಹೈದ್ರಾಬಾದ್ನ ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡಿದೆ.
ಇನ್ನೂ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ.
ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!
ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್, ಜನಾರ್ದನ ರೆಡ್ಡಿ ಅನುಮಾತಿ ಕೊಟ್ಟಿರಲಿಲ್ಲ. ಹೀಗಾಗಿ ರೆಡ್ಡಿ ಕೆಆರ್ಎಸ್ ಪಕ್ಷವನ್ನು ಕಟ್ಟಿ ಅದರಿಂದಲೇ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್ನ ಇಕ್ಬಾಲ್ ಅನ್ಸಾರಿ ಅವರನ್ನು ಸೋಲಿಸಿ ಮತ್ತೆ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದರು. ಆದರೆ, ಇದೀಗ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಂಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.