ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಉಗ್ರ ಪೋಷಕ ಪಾಕಿಸ್ತಾನ, ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು.
ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಆದರೀಗ ಇಡೀ ಆವೃತ್ತಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು,
ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!
ಇದೀಗ ಈ ವಿಚಾರವಾಗಿ, ಬಿಸಿಸಿಐ ನಿರ್ಧಾರವನ್ನು ಗೌರವಿಸಿರುವ ಆರ್ಸಿಬಿ.. ಸೇನೆಗೆ ಸಂಬಂಧಿಸಿ ಟ್ವೀಟ್ ಮಾಡಿದೆ. ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ ನಮ್ಮ ಸೇನಾಪಡೆಗಳ ಅಚಲ ಧೈರ್ಯ ಮತ್ತು ಶೌರ್ಯಕ್ಕೆ ಸೆಲ್ಯೂಟ್ ಹೊಡೆಯುತ್ತೇವೆ. ಭಾರತದ ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ. ಜೈ ಹಿಂದ್ ಎಂದು ಬರೆದುಕೊಂಡಿದೆ.
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತು. ಇದಾದ ನಂತರ ಪಾಕಿಸ್ತಾನ ಸಿಟ್ಟಿಗೆದ್ದಿದ್ದು, ಒಂದರ ನಂತರ ಒಂದರಂತೆ ಅನೇಕ ನೀಚ ಕೃತ್ಯಗಳನ್ನು ಎಸಗುತ್ತಿದೆ. ಪಾಕಿಸ್ತಾನದ ಎಲ್ಲಾ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿದೆ.