Close Menu
Ain Live News
    Facebook X (Twitter) Instagram YouTube
    Friday, May 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಟ್ಯಾಂಕರ್‌ ವಾಟರ್‌ ಮಾಫಿಯಾಗೆ ಬ್ರೇಕ್‌: ಸಂಚಾರಿ ಕಾವೇರಿಗೆ ಡಿ.ಕೆ. ಶಿವಕುಮಾರ್ ಚಾಲನೆ

    By Author AINMay 9, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: “ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

    ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು.

    ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!

    “ಸುಮಾರು 3 ಸಾವಿರ ಕೊಳವೆ ಬಾವಿ ಕೊರೆಸಿ, ಟ್ಯಾಂಕರ್ ಗಳನ್ನು ಇಟ್ಟುಕೊಂಡು 3 ಸಾವಿರ ರೂಪಾಯಿವರೆಗೂ ಹಣ ವಸೂಲಿ ಮಾಡುವ ಪ್ರವೃತ್ತಿ ಹೊಂದಿದ್ದಾರೆ. ಇಂದು ಈ ಯೋಜನೆ ಮೂಲಕ 4 ಸಾವಿರ ಲೀಟರ್ ನೀರಿಗೆ 660 ರೂ. ಹಾಗೂ 6 ಸಾವಿರ ಲೀಟರ್ ನೀರಿಗೆ 740 ರೂ. ದರ ನಿಗದಿ ಮಾಡಲಾಗಿದೆ. ಇದು ಕೊಳವೆ ಬಾವಿ ನೀರಲ್ಲ. ಇದು ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ನೀಡುತ್ತಿರುವ ಶುದ್ಧ ಕುಡಿಯುವ ನೀರು” ಎಂದು ತಿಳಿಸಿದರು.

    “ನೀರಿನ ಮಾಫಿಯಾ ತಡೆಯಲು ಈ ಯೋಜನೆ ಚಾಲನೆ ನೀಡಲಾಗಿದೆ. ಇದು ಸಣ್ಣ ಯೋಜನೆಯಲ್ಲ. ಕಳೆದ ವರ್ಷ ಬರಗಾಲದಲ್ಲಿ ನೀರಿನ ಅಭಾವ ಎದುರಾದಾಗ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿಭಾಯಿಸಲಾಯಿತು. ಕೆರೆಗಳನ್ನು ತುಂಬಿಸಿ, ಅಂತರ್ಜಲ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದೇವೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ಕೆರೆಗಳ ಅಭಿವೃದ್ಧಿ ಸಭೆ ಮಾಡಲಾಗಿದೆ. ಸಣ್ಣ ಮನೆಗಳಿಗೆ ನೀರಿನ ಸಂಪರ್ಕ ನೀಡಲು ಕೇವಲ 1 ಸಾವಿರ ಶುಲ್ಕ ಪಡೆಯಲು ತೀರ್ಮಾನಿಸಿದ್ದೇವೆ. ಅಪಾರ್ಟ್ಮೆಂಟ್ ನವರಿಗೆ ಆರಂಭದಲ್ಲಿ 20% ಹಣ ಪಡೆದು ನಂತರ ಒಂದು ವರ್ಷ ಕಾಲಾವಕಾಶ ನೀಡಲು ಮುಂದಾಗಿದ್ದೇವೆ. ಹೀಗೆ ಹೊಸ ನೀತಿಗಳ ಮೂಲಕ ಎಲ್ಲವನ್ನು ಒಂದು ವ್ಯವಸ್ಥೆಯಲ್ಲಿ ತರುವ ಪ್ರಯತ್ನ ಮಾಡಲಾಗುತ್ತಿದೆ” ಎಂದು ತಿಳಿಸಿದರು.

    “ಬೆಂಗಳೂರಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕೆಲಸಗಳ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಇಂದು ಸರ್ವರಿಗೂ ಸರಳ ಕಾವೇರಿ, ಮನೆ ಬಾಗಿಲಿಗೆ ಸಂಚಾರಿ ಕಾವೇರಿ ಯೋಜನೆಗಳನ್ನು ಪ್ರಾರಂಭಿಸಿದ್ದು, ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಇಂತಹ ಯೋಜನೆ ಜಾರಿಗೆ ತರಲಾಗಿದೆ. ನಿನ್ನೆ ನೆಲಮಂಗಲದಲ್ಲಿ ರೂ.1,900 ಕೋಟಿ ವೆಚ್ಚದಲ್ಲಿ ವೃಷಭಾವತಿ ನೀರನ್ನು ಸಂಸ್ಕರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದೆ. ಪ್ರತಿ ನೀರಿನ ಹನಿಯು ಮಹತ್ವದ್ದಾಗಿದೆ. ಅನೇಕರು ಇದನ್ನು ಟೀಕೆ ಮಾಡಬಹುದು. ಆದರೆ ಇಂತಹ ಯೋಜನೆ ಇದೇ ಮೊದಲಲ್ಲ. ದೆಹಲಿಯಲ್ಲೂ ಯಮುನಾ ನದಿ ನೀರನ್ನು ಗಿಡ ಬೆಳೆಸಲು, ವಾಹನ ತೊಳೆಯಲು ಹಾಗೂ ಕೈಗಾರಿಕೆಗೆ ಪೂರೈಸುತ್ತಾರೆ” ಎಂದರು.

    “ನಾನು ಹಾಗೂ ಶಾಸಕರು ಈ ನೀರನ್ನು ಕುಡಿಯುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದ್ದೇವೆ. ಇನ್ನು ಶುದ್ಧ ಕುಡಿಯುವ ನೀರಿನ ಘಟಕವನ್ನು ಮೊದಲು ಆರಂಭಿಸಿದ್ದು, ನಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ. ಸುಮಾರು 300ಕ್ಕೂ ಹೆಚ್ಚು ಘಟಕ ಪ್ರಾರಂಭಿಸಿದ್ದೆ. ನಾನು ಬಹಳ ಇಚ್ಛಾಶಕ್ತಿಯಿಂದ ಬೆಂಗಳೂರು ನಗರದ ಜವಾಬ್ದಾರಿ ವಹಿಸಿದ್ದೇನೆ. ಇದು ಬಹಳ ಕಷ್ಟದ ಕೆಲಸ ಎಂದು ಗೊತ್ತಿದೆ. ಆದರೂ ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಮನಸ್ಸಿದ್ದಲ್ಲಿ ಮಾರ್ಗ, ಭಕ್ತಿ ಇದ್ದಲ್ಲಿ ದೇವರು ಎಂದು ನಂಬಿ ಕೆಲಸ ಮಾಡುತ್ತಿದ್ದೇನೆ” ಎಂದರು.

    “ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ಇತ್ತೀಚೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಲಾಗಿದೆ. ಈಗ ಕರ್ನಾಟಕ ಸರ್ಕಾರ ಕೆಆರ್ ಎಸ್ ಬಳಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ನೀರಾವರಿ ಇಲಾಖೆಯಿಂದ ಸುಮಾರು 100 ಕೋಟಿ ಮೀಸಲಿಡಲಾಗಿದೆ. ಪ್ರವಾಸೋದ್ಯಮ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳನ್ನು ಒಳಪಡಿಕೊಳ್ಳಲಾಗಿದೆ. ಇದಕ್ಕಾಗಿ ಸಮಿತಿ ಮಾಡಿ ರಾಮ್ ಪ್ರಸಾತ್ ಮನೋಹರ್ ಅವರ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ದಸರಾ ವೇಳೆಗೆ ಈ ಕಾವೇರಿ ಆರತಿ ಮಾಡಲು ಸಿದ್ಧತೆ ಮಾಡಲಾಗುತ್ತಿದೆ” ಎಂದರು.

    “ಕೊಡಗಿನಿಂದ ಹಿಡಿದು ರಾಜ್ಯದ ಎಲ್ಲಾ ಭಾಗಗಳ ಸಂಸ್ಕೃತಿ ಸೇರಿಸಿ ವಾರದಲ್ಲಿ ಮೂರು ದಿನ ಪೂಜೆ ಸಲ್ಲಿಸಬೇಕು, ಬರುವ ಪ್ರವಾಸಿಗರು ಪೂಜೆ ಸಲ್ಲಿಸಿಕೊಂಡು ಹೋಗಲು ಅವಕಾಶ ಕಲ್ಪಿಸಿಕೊಡಲಾಗುವುದು. ಕಾವೇರಿ ಹಾಗೂ ನೀರಿನ ಮಹತ್ವ ಎಲ್ಲರಿಗೂ ಅರಿವಾಗಲಿ ಎಂದು ಈ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ ಟೆಂಡರ್ ಕರೆಯಲಾಗಿದ್ದು, ಇಲಾಖೆಗಳಿಗೆ ಸೂಕ್ತ ಜವಾಬ್ದಾರಿ ನೀಡಲಾಗುವುದು” ಎಂದು ಹೇಳಿದರು.

    “ನಾನು ಜವಾಬ್ದಾರಿ ತೆಗೆದುಕೊಂಡು ಬಿಡಬ್ಲ್ಯೂಎಸ್ಎಸ್ ಬಿ ಸಭೆ ನಡೆಸಿದಾಗಲೇ ಇಲ್ಲಿನ ಆರ್ಥಿಕ ಪರಿಸ್ಥಿತಿ ಅರಿವಾಯಿತು. 2014ರ ಬಳಿಕ ನೀರಿನ ದರ ಏರಿಕೆ ಮಾಡು ಯಾರೂ ಧೈರ್ಯ ಮಾಡಿರಲಿಲ್ಲ. ನಾನು ಕೇವಲ ಸಿಎಂ ಅವರಿಗೆ ವಿಚಾರ ತಿಳಿಸಿ, ತೀರ್ಮಾನ ಮಾಡಿದೆ. ನಂತರ ಟೀಕೆ ಮಾಡುವವರು, ಧಿಕ್ಕಾರ ಕೂಗುವವರು ನನ್ನ ವಿರುದ್ಧ ಮಾಡಲಿ, ನೀವು ದರ ಏರಿಕೆ ಮಾಡಿ ಎಂದು ಮಂಡಳಿಗೆ ಸೂಚಿಸಿದೆ. ಎಲ್ಲಾ ವಸ್ತುಗಳ ದರ ಏರಿಕೆಯಾಗುತ್ತಿರುವಾಗ ನೀರಿನ ದರ ಮಾತ್ರ ಏರಿಕೆಯಾಗಿಲ್ಲ. ನಿಮ್ಮ ಮಂಡಳಿಯೂ ನಡೆಯಬೇಕಲ್ಲವೇ ಎಂದು ದರ ಏರಿಕೆ ಮಾಡಲಾಗಿದೆ” ಎಂದು ಹೇಳಿದರು.

    “ಕಾವೇರಿ ನೀರಿನಲ್ಲಿ ಬಾಕಿ ಉಳಿದಿದ್ದ 6 ಟಿಎಂಸಿ ನೀರನ್ನು ಬಿಡಬ್ಲ್ಯೂಎಸ್ಎಸ್ ಬಿ ಪೂರೈಕೆಗೆ ನಾನು ಆದೇಶ ಹೊರಡಿಸಿದೆ. ಮುಂದೆ ಕಾವೇರಿ ಆರನೇ ಹಂತ ಯೋಜನೆಗೆ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ. ದರ ಏರಿಕೆ ನಂತರ ಈಗ ವಿವಿಧ ಬ್ಯಾಂಕುಗಳು ಸಾಲ ನೀಡಲು ಮುಂದೆ ಬರುತ್ತಿವೆ. ಇದರ ಜತೆಗೆ ಒಳಚರಂಡಿ ವ್ಯವಸ್ಥೆಯನ್ನು ಉತ್ತಮವಾಗಿ ನಿಭಾಯಿಸುತ್ತಿದ್ದೀರಿ. ನಾನು ಕೃಷ್ಣಾ ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ನನ್ನನ್ನು ವಿದೇಶಕ್ಕೆ ಅಧ್ಯಯನಕ್ಕಾಗಿ ಕಳುಹಿಸಿದ್ದರು. ಈ ಮಂಡಳಿಯಲ್ಲಿ ರಾಜಕೀಯದವರನ್ನು ಮುಖ್ಯಸ್ಥರನ್ನಾಗಿ ಮಾಡುವ ಅವಕಾಶವಿತ್ತು. ಅದಕ್ಕೆ ಅಂತ್ಯವಾಡಿ ರಾಜಕಾರಣಿಗಳಿಗೆ ಅದರಲ್ಲಿ ಅವಕಾಶ ನೀಡಬಾರದು, ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಇದನ್ನು ನಿಭಾಯಿಸಲು ತೀರ್ಮಾನಿಸಲಾಯಿತು” ಎಂದರು.

    ಖಾಸಗಿಯವರಿಗೆ ನೀಡಲಿಲ್ಲ.

    “ಜೆ.ಹೆಚ್ ಪಟೇಲರ ಕಾಲದಲ್ಲಿ ಇದನ್ನು ಖಾಸಗಿಯವರಿಗೆ ನೀಡಲು ಮುಂದಾಗಿದ್ದರು. ನಂತರ ನೀರು, ವಿದ್ಯುತ್ ಸಂಸ್ಥೆಗಳು ಸರ್ಕಾರದ ನಿಯಂತ್ರಣದಲ್ಲೇ ಇಟ್ಟುಕೊಳ್ಳಬೇಕು ಎಂದು ತೀರ್ಮಾನಿಸಿದೆವು. ದೆಹಲಿ ಹಾಗೂ ಮುಂಬೈನಲ್ಲಿ ವಿದ್ಯುತ್ ಸರಬರಾಜನ್ನು ಖಾಸಗಿಯವರಿಗೆ ನೀಡಿದ್ದಾರೆ. ನನ್ನ ಬಳಿಗೂ ದೊಡ್ಡ ಕಂಪನಿಗಳು ಬಂದು ಇದನ್ನು ನಮಗೆ ಹಸ್ತಾಂತರ ಮಾಡಿ ನಾವು ಇದನ್ನು ನಡೆಸುತ್ತೇವೆ ಎಂದು ಕೇಳಿದರು. ಆದರೆ ನಾನು ಅದಕ್ಕೆ ಒಪ್ಪಲಿಲ್ಲ” ಎಂದು ಹೇಳಿದರು.

    ಕೊಳಚೆ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಪ್ರತ್ಯೇಕವಾಗಿ ಸಭೆ ಮಾಡಿ ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ನೀರನ್ನು ಸಂಸ್ಕರಿಸಲು ಕೇಂದ್ರ ಸರ್ಕಾರ ಹಾಗೂ ವಿಶ್ವ ಬ್ಯಾಂಕುಗಳ ನೆರವು ಪಡೆಯಲಾಗುವುದು. ಇನ್ನು ಕಸ ವಿಲೇವಾರಿ ವಿಚಾರವಾಗಿ ಕೆಲವರು ಮಾಫಿಯಾ ಮಾಡಿಕೊಂಡಿದ್ದರು. ನಾವು ತನಿಖೆ ಮಾಡಿಸಿದ್ದೇವೆ. ನ್ಯಾಯಾಲಯ ಈಗ ನಮಗೆ ಟೆಂಡರ್ ಕರೆಯಲು ಅವಕಾಶ ನೀಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಕಸ ವಿಲೇವಾರಿ, ಕೊಳಚೆ ನೀರು, ಕುಡಿಯುವ ನೀರು, ವಿದ್ಯುತ್, ಸಂಚಾರ ಕ್ಷೇತ್ರಗಳ ಬಗ್ಗೆ ಅಗತ್ಯ ಯೋಜನೆಗಳನ್ನು ರೂಪಿಸಲಾಗಿದೆ” ಎಂದು ತಿಳಿಸಿದರು.

    ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟುಗಳಿಗೆ ಭದ್ರತೆ: ಡಿಸಿಎಂ ಡಿ.ಕೆ. ಶಿವಕುಮಾರ್

    ಕಾರ್ಯಕ್ರಮದ ನಂತರ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಅಣೆಕಟ್ಟುಗಳಿಗೆ ಭದ್ರತೆ ಒದಗಿಸಿರುವ ಬಗ್ಗೆ ಕೇಳಿದಾಗ, “ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ಒದಗಿಸಲಾಗಿದೆ. ಈ ಪರಿಸ್ಥಿತಿಯಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಸರ್ಕಾರ ಈ ಕ್ರಮ ಕೈಗೊಂಡಿದೆ. ತಾಂತ್ರಿಕ ಸಿಬ್ಬಂದಿಗಳ ಹೊರತಾಗಿ ಯಾವುದೇ ಪ್ರವಾಸಿಗರಿಗೆ ಅಣೆಕಟ್ಟಿನ ಬಳಿ ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದ್ದೇವೆ. ಇದು ದೇಶದ ವಿಚಾರ ಸಾರ್ವಜನಿಕರು ಈ ವಿಚಾರವಾಗಿ ಸಹಕಾರ ನೀಡಬೇಕು” ಎಂದು ತಿಳಿಸಿದರು.

    ಬೆಂಗಳೂರಿನ ಭದ್ರತೆ ಬಗ್ಗೆ ಕೇಳಿದಾಗ, “ಬೆಂಗಳೂರಿನ ಭದ್ರತೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಅಗತ್ಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂಬಂಧಪಟ್ಟ ಸಂದೇಶವನ್ನು ರವಾನಿಸುತ್ತೇವೆ. ದೇಶದ ಐಕ್ಯತೆ ಗಮನದಲ್ಲಿಟ್ಟುಕೊಂಡು ಯೋಧರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾಗಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ಇತರೆ ವಿಚಾರ ಚರ್ಚೆ ಮಾಡಿ ನಂತರ ಮಾಹಿತಿ ನೀಡುತ್ತೇವೆ” ಎಂದರು.

    ನೆಲಮಂಗಲದ ಯೋಜನೆ ವಿಚಾರವಾಗಿ ರೈತರು ವಿರೋಧ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅಲ್ಲಿ ವಿರೋಧ ಮಾಡುತ್ತಿರುವವರು ರೈತರಲ್ಲ. ಅವರು ರೈತ ವಿರೋಧಿಗಳು ನಾವು ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ನೀರನ್ನು ಸಂಸ್ಕರಿಸಿ ನೀಡುತ್ತಿದ್ದೇವೆ. ಕೋಲಾರಕ್ಕೆ ಹೋಗಿ ನೋಡಲಿ. ವಿರೋಧ ಮಾಡುವವರಿಗೆ ತಲೆಕೆಡಿಸಿಕೊಳ್ಳಲು ಆಗುವುದಿಲ್ಲ. ಕೆರೆಗಳಿಗೆ ತುಂಬಿಸಿದ ನೀರು ಭೂಮಿಯ ಮೂಲಕ ಇಂಗುವಾಗ ಮತ್ತಷ್ಟು ಶುದ್ಧೀಕರಣವಾಗುತ್ತದೆ. ಆಮೂಲಕ ಅಂತರ್ಜಲ ಏರಿಕೆಯಾಗುತ್ತದೆ. ವೃಷಭಾವತಿ ನೀರು ಅರ್ಕಾವತಿ ಮೂಲಕ ನಮಗೆ ನೀರು ಬರುತ್ತಿಲ್ಲವೇ? ಕನಕಪುರ ಟೌನ್ ನಲ್ಲಿ ಹರಿಯುವ ನೀರು ಇದೇ ಆಗಿದೆ. ನಾವು ಅದನ್ನು ಕುಡಿದು ಗಟ್ಟಿಯಾಗಿಲ್ಲವೇ?” ಎಂದು ತಿರುಗೇಟು ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ಸೂಸೈಡ್ ಬಾಂಬರ್ ಆಗೋಕೆ I AM READY: ಕೇಸರಿ ಟೀಂಗೆ ಸಚಿವ ಜಮೀರ್‌ ಟಕ್ಕರ್‌

    May 9, 2025

    ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆಗೆ ಬಾರೀ ಜನಸ್ಪಂದನ: ಡಿ.ಕೆ ಶಿವಕುಮಾರ್

    May 9, 2025

    ಸೈನಿಕರ ಶ್ರೇಯೋಭಿವೃದ್ಧಿಗೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್‌ ಅಹ್ಮದ್‌!

    May 9, 2025

    IPL 2025: ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್: BCCI ಮಹತ್ವದ ನಿರ್ಧಾರ ಪ್ರಕಟ – ಮುಂದಿನ ಪಂದ್ಯ ಯಾವಾಗ.?

    May 9, 2025

    IPL 2025: ಐಪಿಎಲ್ ಮುಂದೂಡಿಕೆ: ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದ RCB!

    May 9, 2025

    ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ‌NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ್

    May 9, 2025

    ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIAಗೆ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ!

    May 9, 2025

    Bangalore: ಆಪರೇಷನ್ ಸಿಂಧೂರ್ ಬೆಂಬಲಿಸಿ ಕಾಂಗ್ರೆಸ್ ನಾಯಕರಿಂದ ತಿರಂಗಾ ಯಾತ್ರೆ!

    May 9, 2025

    PM Kisan: ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಪಿಎಂ ಕಿಸಾನ್ 20ನೇ ಕಂತಿನ ಹಣ ಖಾತೆಗೆ ಜಮಾ

    May 9, 2025

    ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ: ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ʼನಲ್ಲಿ ಹೈಅಲರ್ಟ್!

    May 9, 2025

    ಭಾರತ-ಪಾಕ್‌ ಯುದ್ಧ: ಐಪಿಎಲ್‌ ಟೂರ್ನಿ ಮುಂದೂಡಿಕೆ!

    May 9, 2025

    ಭಾರತ – ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ: ರಾಜ್ಯದಲ್ಲಿ ಸ್ಲೀಪರ್ ಸೆಲ್ ಗಳ ಮೇಲೆ ನಿಗಾ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.