ಇಸ್ಲಾಮಾಬಾದ್: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಪಾಕಿಸ್ತಾನವೂ ಕೂಡ ಪ್ರತಿ ದಾಳಿ ನಡೆಸಿದ್ದರೂ ಎಲ್ಲವೂ ವಿಫಲಗೊಂಡಿದೆ. ಸಧ್ಯಕ್ಕೆ ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ.
ಏಪ್ರಿಲ್ 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ 100 ಉಗ್ರರನ್ನು ಹತ್ಯೆ ಮಾಡಿತ್ತು.
ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ಇದಾದ ಬಳಿಕ ಪಾಕಿಸ್ತಾನವು ಭಾರತದ ಮೇಲೆ ಪ್ರತಿ ದಾಳಿ ಶುರು ಮಾಡಿತ್ತು, ಗಡಿಗಳ ಉದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಅನೇಕ ನಾಗರಿಕರನ್ನು ಹತ್ಯೆ ಮಾಡಿತ್ತು, ಹೀಗಾಗಿ ಕೋಪಗೊಂಡ ಭಾರತ ಮತ್ತೆ ಪಾಕ್ ವಿರುದ್ಧ ದಾಳಿಗೆ ನಿಂತಿದೆ.
ಇನ್ನೂ ಅಸಿಮ್ ಮುನೀರ್ನಿಂದ ಪಾಕಿಸ್ತಾನ ನಾಶವಾಗುತ್ತಿದೆ ಎಂದು ಪಾಕ್ ಜನರು ಸಿಟ್ಟು ಹೊರಹಾಕುತ್ತಿದ್ದಾರೆ. ಭಾರತ ತನ್ನ ಮೇಲೆ ದಾಳಿ ನಡೆಸಲು ಮುನೀರ್ ನಿರ್ಧಾರವೇ ಕಾರಣ ಎಂದು ಜನ ಪೋಸ್ಟ್ ಮಾಡುತ್ತಿದ್ದಾರೆ. ಒಂದು ವೇಳೆ ಇಮ್ರಾನ್ ಖಾನ್ ಈ ಸಂದರ್ಭದಲ್ಲಿ ಇದ್ದಿದ್ದರೆ ಎರಡೂ ದೇಶಗಳ ಮಧ್ಯೆ ಉತ್ತಮ ಸಂಬಂಧ ಇರುತ್ತಿತ್ತು.
ಮುನೀರ್ ತನ್ನ ವೈಯಕ್ತಿಕ ಲಾಭಕ್ಕಾಗಿ ಭಾರತದ ವಿರುದ್ಧ ದಾಳಿ ನಡೆಸುತ್ತಿದ್ದಾನೆ. ಕೂಡಲೇ ಬಂಧನದಲ್ಲಿರುವ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡಿ ಎಂದು ಜನರು ಆಗ್ರಹಿಸುತ್ತಿದ್ದಾರೆ. ಪಹಲ್ಗಾಮ್ ದಾಳಿಗೂ ಮೊದಲು ಮುನೀರ್ ಕಾಶ್ಮೀರ ಪಾಕಿಸ್ತಾನದ ಕಂಠನಾಳ. ಅದನ್ನು ನಾವು ಪಡೆಯುತ್ತೇವೆ ಎಂದು ಪ್ರಚೋದನೆ ನೀಡಿದ್ದ.