ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ನಿಯಂತ್ರಣ ರೇಖೆ (ಎಲ್ಒಸಿ)ಯಲ್ಲಿ ಭಾರೀ ಶೆಲ್ ದಾಳಿಯಿಂದಾಗಿ ಸಾವುನೋವುಗಳು ಮತ್ತು ಗಾಯಗಳು ಸಂಭವಿಸಿವೆ. ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳು ಮತ್ತು ಹತ್ತಿರದ ಪ್ರದೇಶಗಳಲ್ಲಿ ಈ ಘಟನೆ ಸಂಭವಿಸಿದೆ.
ಇನ್ನೂ ಶೆಲ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಮತ್ತು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾಅವರು ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ರಾಜೌರಿಯಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ನಾವು ಜಮ್ಮು ಮತ್ತು ಕಾಶ್ಮೀರಆಡಳಿತ ಸೇವೆಗಳ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು. ಅಲ್ಲದೇ ನಾನು ಅಧ್ಯಕ್ಷತೆ ವಹಿಸಿದ್ದ ಆನ್ಲೈನ್ ಸಭೆಯಲ್ಲಿ ಭಾಗವಹಿಸಿದ್ದರು.
ಇಂದು ಅಧಿಕಾರಿಯ ನಿವಾಸದ ಮೇಲೆ ಪಾಕ್ ಶೆಲ್ ದಾಳಿ ನಡಿಸಿದ್ದು, ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಭೀಕರ ಜೀವಹಾನಿಯಿಂದ ನನಗೆ ಆಘಾತವಾಗಿದೆ. ಈ ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್ ಅಬ್ದುಲ್ಲಾ ತಮ್ಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.