ಬೆಂಗಳೂರು: ಭಾರತದ ಪ್ರತೀಕಾರದ ಕ್ರಮದಿಂದಾಗಿ ಪಾಕಿಸ್ತಾನದಲ್ಲಿ ಭೀತಿ ಉಂಟಾಗಿದೆ. ಅದರ ಹಲವು ನಗರಗಳಲ್ಲಿ ಅವ್ಯವಸ್ಥೆಯ ವಾತಾವರಣವಿದೆ. ಸೇನಾ ಶಿಬಿರಗಳಿಂದ ಜನರನ್ನು ಸ್ಥಳಾಂತರಿಸುವ ಕೆಲಸವೂ ನಡೆಯುತ್ತಿದೆ. ಇನ್ನೂ ಈ ವಿಚಾರವಾಗಿ,
ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡಿ ಸೂಕ್ಷ್ಮ ಪರಿಸ್ಥಿತಿ ಇರೋದ್ರಿಂದ ಪೊಲೀಸರಿಗೆ ರಜೆ ಘೋಷಣೆ ಮಾಡಲ್ಲ. ಹೆಚ್ಚುವರಿ ರಜೆಗಳನ್ನ ಯಾರಿಗೂ ಕೊಡ್ತಿಲ್ಲ. ಗಡಿಯಲ್ಲಿ ಈಗಾಗಲೇ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ಷ್ಮ ಸನ್ನಿವೇಶ ಯಾವಾಗ ನಾರ್ಮಲ್ ಆಗುತ್ತೋ ಗೊತ್ತಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂದು ಮಾಹಿತಿ ನೀಡಿದರು.
ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ರಾಜ್ಯದಲ್ಲಿ ಫೇಕ್ ನ್ಯೂಸ್ ಹೆಚ್ಚಾಗಿ ಹರಡುತ್ತಿರುವ ಕುರಿತಂತೆ ಐಎಸ್‌ಡಿಯೊಂದಿಗೆ ಮಧ್ಯಾಹ್ನ ಸಭೆ ಕರೆದಿದ್ದೇನೆ. ಐಟಿ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭಾಗವಹಿಸುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಫೇಕ್ ನ್ಯೂಸ್ ಹೆಚ್ಚಾಗಿ ಹರಿದಾಡುತ್ತಿವೆ.
ಹಳೇ ವಿಡಿಯೋಗಳನ್ನು ತೆಗೆದು ಪೋಸ್ಟ್ ಮಾಡಲಾಗುತ್ತಿದೆ. ಪ್ರಚೋದನಾಕಾರಿ ವಿಷಯಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ಸುಳ್ಳು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ತಾಂತ್ರಿಕವಾಗಿ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು.