ಇಸ್ಲಾಮಾಬಾದ್: ಈಗಾಗಲೇ ಭಾರತದ ವೈಮಾನಿಕ ದಾಳಿಯಿಂದ ಸಂಕಷ್ಟದಲ್ಲಿರುವ ಪಾಕಿಸ್ತಾನ ಮತ್ತೊಂದು ಬಿಕ್ಕಟ್ಟನ್ನು ಎದುರಿಸಿದೆ. ಭಾರತದ ದಾಳಿಯಿಂದ ತತ್ತರಿಸಿರುವ ಪಾಕಿಸ್ತಾನ ಈಗ ತೈಲ ಕೊರತೆಯಿಂದ ಬಳಲುತ್ತಿದೆ. ಇಸ್ಲಾಮಾಬಾದ್ ರಾಜಧಾನಿ ಪ್ರದೇಶದ ಆಡಳಿತವು ರಾಜಧಾನಿಯಲ್ಲಿರುವ ಎಲ್ಲಾ ಪೆಟ್ರೋಲ್ ಮತ್ತು ಡೀಸೆಲ್ ಭರ್ತಿ ಕೇಂದ್ರಗಳನ್ನು ಮುಂದಿನ 48 ಗಂಟೆಗಳ ಕಾಲ ಸಂಪೂರ್ಣವಾಗಿ ಮುಚ್ಚಲು ತಕ್ಷಣದ ಆದೇಶ ಹೊರಡಿಸಿದೆ.
ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ಇಸ್ಲಾಮಾಬಾದ್ ಸರ್ಕಾರವು ಶನಿವಾರ ಬೆಳಿಗ್ಗೆ 6 ಗಂಟೆಯಿಂದ 48 ಗಂಟೆಗಳ ಕಾಲ ನಗರದ ಎಲ್ಲಾ ಪೆಟ್ರೋಲ್ ಬಂಕ್‌ಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಆದಾಗ್ಯೂ, ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲು ಕಾರಣಗಳ ಬಗ್ಗೆ ಸ್ಪಷ್ಟ ವಿವರಗಳು ಬಹಿರಂಗಗೊಂಡಿಲ್ಲ. ಇದೇ ವೇಳೆ, ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿತು. ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಇನ್ನಷ್ಟು ಹೆಚ್ಚಿಸಿದೆ.