ನವದೆಹಲಿ: ಭಾರತದ ವಿರೋಧಿಗಳಿಗೆ ಬ್ರಹ್ಮೋಸ್ ಕ್ಷಿಪಣಿ ಸ್ಪಷ್ಟ ಸಂದೇಶ ಕೊಟ್ಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ದೆಹಲಿಯಿಂದಲೇ ವರ್ಚುವಲ್ ಆಗಿ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಉತ್ಪಾದನಾ ಘಟಕವನ್ನು ಉದ್ಘಾಟಿಸಿದ ರಾಜನಾಥ್ ಸಿಂಗ್ ಬಳಿಕ ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರು, ಭಾರತದ ನಿಲುವುಗಳೇನು ಎಂಬುದರ ಬಗ್ಗೆ ಮಾತನಾಡಿದ್ದಾರೆ.
Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ
ಭಾರತದ ವಿರೋಧಿಗಳಿಗೆ ಬ್ರಹ್ಮೋಸ್ ಕ್ಷಿಪಣಿ ಸ್ಪಷ್ಟ ಸಂದೇಶ ಕೊಟ್ಟಿದೆ. ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಭಾರತದ ಒಂದು ಶಕ್ತಿಯಾಗಿದೆ ಭಾರತದ ಶಕ್ತಿ, ಸಾಮರ್ಥ್ಯ ಏನೆಂಬುದು ವಿಶ್ವಕ್ಕೆ ಮತ್ತೊಮ್ಮೆ ಗೊತ್ತಾಗಿದೆ ಎಂದರು.
ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಲಾಗಿದ್ದು, ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಸಿದ್ದಕ್ಕೆ ಸೇನೆಗೆ ಅಭಿನಂದನೆಗಳು. ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಆಪರೇಷನ್ ಸಿಂಧೂರ್ ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಲಾಗಿದೆ ಎಂದರು.
ಆಪರೇಷನ್ ಸಿಂಧೂರ್ ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಲಾಗಿದೆ. ಉಗ್ರರಿಗೆ ಭಾರತ ಸುರಕ್ಷಿತ ಸ್ಥಳವಲ್ಲವೆಂದು ಸಂದೇಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಭಾರತದಲ್ಲಿ ಭಯೋತ್ಪಾದನೆ ಬೆಳೆಯಲು ಬಿಡಲ್ಲ. ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶ ರವಾನಿಸಿದರು.