ಬೀದರ್: ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು.
ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ. ಆದರೂ ಪಾಕಿಸ್ತಾನ ತನ್ನ ವರಸೆಯನ್ನು ಬಿಡದೆ ಭಾರತದ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ.
Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ
ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪುರ ಗ್ರಾಮದ ಬಸವಕಿರಣ ಸೇವೆಗೆ ವಾಪಸ್ ಆಗಿದ್ದಾರೆ. ಪಂಜಾಬ್ನ ಅಮೃತಸರದಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧ ಬಸವಕಿರಣ, ಏಪ್ರಿಲ್ 27ರಂದು ರಜೆ ಮೇಲೆ ಊರಿಗೆ ಬಂದಿದ್ದರು. ಇದೀಗ ಸೇನೆಯ ತುರ್ತು ಕರೆಯ ಮೇರೆಗೆ ಕರ್ತವ್ಯಕ್ಕೆ ಮರಳಿದ್ದಾರೆ. ಸಹೋದರ ಬಸವಕಿರಣಗೆ ಅಕ್ಕ ವಚನಶ್ರೀ ಶುಭ ಹಾರೈಸಿದ್ದಾರೆ.