ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧಾನರಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ವಿಶ್ವರೂಪ್ ಎಂದೇ ರಾಕೇಶ್ ಪೂಜಾರಿ ಜನಪ್ರಿಯತೆ ಪಡೆದಿದ್ದರು. ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಇದ್ದರು. ಆದರೆ, ‘ಕಾಮಿಡಿ ಕಿಲಾಡಿಗಳು’ ವೇದಿಕೆ ಅವರ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.