ಬೆಂಗಳೂರು: ಬೇಸಿಗೆಗಾಲದಲ್ಲಿ ಮಳೆರಾಯನ ಆರ್ಭಟ ಜೋರಾಗಿಯೇ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಂಎಂ ಹಿಲ್ಸ್, ಪುತ್ತೂರು, ಶಿವಮೊಗ್ಗದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.