Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿಗೆ ಮಾನ ಮರ್ಯಾದೆ ಇಲ್ಲ. ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ ಕೋಪತಾಪವೇಕೆ ?

    By Author AINMay 12, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ: ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ.

    ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80  ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಚಾಮರಾಜನಗರ ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ಪಾಕ್‌ ಬಗ್ಗು ಬಡಿದ ಭಾರತ: ಮೌನ ಮುರಿದ ಮೋದಿ – ದೇಶವನ್ನುದ್ದೇಶಿಸಿ ಮಾತನಾಡಲಿರುವ ನಮೋ

    ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು  ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.

    ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯ ವಿರುದ್ಧವೇ ಹೊರತು ನಮ್ಮ ಕಾಂಗ್ರೆಸ್ ಸರ್ಕಾರದ ಮೇಲಲ್ಲ ಎಂದು ಬಿಜೆಪಿ ಯ ಜನಕ್ರೋಶ ಯಾತ್ರೆಯನ್ನ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

    ಮೂರು ಹಂತಗಳಲ್ಲಿ ಸಮೀಕ್ಷೆ

    ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

    ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂದರೆ. ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ದ, ಬಸವ ಅವರು ಜಾತಿ ಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣರನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ. ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಾವು ಹುಟ್ಡಿದ ಜಾತಿಯಲ್ಲೇ ಸಾಯಬೇಕು. ನಾವು ಮೇಲಕ್ಜೆ ಹೋಗುವಂತಿಲ್ಲ. ಜಾತಿ ಸಮಾಜಕ್ಕೆ ಚಲನೆ ಇಲ್ಲ. ವರ್ಗಕ್ಕೆ ಚಲನೆ ಇದೆ. ಎಲ್ಲರಿಗೂ ಶಿಕ್ಷಣ ಸಿಕ್ಕು , ಆರ್ಥಿಕವಾಗಿ, ಸಾಮಾಜಿಕವಾಗಿ ಅವಕಾಶಗಳು ಸಿಕ್ಕಾಗ ಮಾತ್ರ ಸಮಾಜಕ್ಕೆ ಚಲನೆ ಸಿಗುತ್ತದೆ ಎಂದರು.

    ಜಾತಿ ಅಸಮಾನತೆ ಕಾರಣಕ್ಕೆ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಸೇರಿ, ತಾನು ಹಿಂದೂವಾಗಿ ಹುಟ್ಟಿ ಹಿಂದೂವಾಗಿ ಸಾಯುವುದಿಲ್ಲ ಎಂದು ಘೋಷಿದಿದ್ದನ್ನು ಸ್ಮರಿಸಿದರು.

    ಒಳ‌ಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲಾ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ ಎಂದರು.

    ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ . ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು  ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಧಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು ಇರಬೇಕಿತ್ತು  ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    July 1, 2025

    ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.