ಚಿಕ್ಕಮಗಳೂರು: ಕರ್ನಾಟಕದಲ್ಲಿ ಹಸುಗಳ ಮೇಲೆ ಕ್ರೌರ್ಯ ಮರೆಯುತ್ತಿರುವ ಪ್ರಕರಣಗಳು ಹೆಚ್ವುತ್ತಲೇ ಇವೆ. ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಇದೀಗ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬುವವರಿಗೆ ಸೇರಿದ ಹಸುವನ್ನು ರಾತ್ರೋರಾತ್ರಿ ಹಸು ಕಳವು ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ, ಕಳ್ಳತನ ಯತ್ನ ವಿಫಲವಾದಾಗ ರೋಷದಿಂದ ಹಸುವಿನ ಕೆಚ್ಚಲು ಕತ್ತರಿಸಿ ಕಳ್ಳರು ಪರಾರಿಯಾಗಿದ್ದಾರೆ. ಪರಿಣಾಮವಾಗಿ ಹಸು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ.
ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಿರಂತರವಾಗಿ ಜಾನುವಾರುಗಳ ಕಳ್ಳತನ ಮಾಡಲಾಗುತ್ತಿದೆ. ಆದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.